ಬೆಂಗಳೂರು: ಟೀ ಚೆನ್ನಾಗಿಲ್ಲ ಎಂದಿದ್ದಕ್ಕೆ ಬಿಎಂಟಿಸಿ ಬಸ್ ಚಾಲಕನ ಮೇಲೆ ಟೀ ಅಂಗಡಿ ಸಿಬ್ಬಂದಿ ಹಲ್ಲೆ ಮಾಡಿರುವ ಘಟನೆ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ನಡೆದಿದೆ.
46ನೇ ಚಾಲಕ ಮೂಗಪ್ಪ ಟೀ ಚೆನ್ನಾಗಿಲ್ಲ ಎಂದಿದ್ದಕ್ಕೆ ರೊಚ್ಚಿಗೆದ್ದ ಗುರುರಾಜ್ ರಕ್ತ ಬರುವಂತೆ ಫ್ಲಾಸ್ಕ್‌ನಿಂದ ತಲೆಗೆ ಹೊಡೆದು ಹಲ್ಲೆ ಮಾಡಿದ್ದಾನೆ.
ಹಲ್ಲೆಗೊಳಗಾದ ಚಾಲಕ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಹಲ್ಲೆ ಮಾಡಿದ ಗುರುರಾಜ್‌ನನ್ನು ಬಂಧಿಸಿ, ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.



















