ಬೆಂಗಳೂರು: ಕೇಂದ್ರ ಸರ್ಕಾರದ ಹುದ್ದೆಗಳನ್ನು ಬಯಸುತ್ತಿರುವವರಿಗೆ ಶುಭ ಸಮಾಚಾರ ಲಭಿಸಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಸೆಂಟ್ರಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (CEL Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 45 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಡಿಪ್ಲೋಮಾ ಎಂಜಿನಿಯರ್, ಟೆಕ್ನಿಶಿಯನ್, ಆಪರೇಟರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಸೆಂಟ್ರಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
ಒಟ್ಟು ಹುದ್ದೆ: 45
ಉದ್ಯೋಗ ಸ್ಥಳ: ಸಾಹಿಬಾಬಾದ್, ಘಾಜಿಯಾಬಾದ್ (ಉತ್ತರ ಪ್ರದೇಶ)
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 25
ಯಾವ ಹುದ್ದೆ ಎಷ್ಟು ಖಾಲಿ?
ಡಿಪ್ಲೋಮಾ ಎಂಜಿನಿಯರ್ (ಎಲೆಕ್ಟ್ರಾನಿಕ್ಸ್) 25, ಡಿಪ್ಲೋಮಾ ಎಂಜಿನಿಯರ್ (ಎಲೆಕ್ಟ್ರಿಕಲ್) 04, ಡಿಪ್ಲೋಮಾ ಎಂಜಿನಿಯರ್ (ಮೆಕ್ಯಾನಿಕಲ್) 04, ಟೆಕ್ನಿಶಿಯನ್ (ಎಲೆಕ್ಟ್ರಾನಿಕ್ಸ್) 03, ಟೆಕ್ನಿಶಿಯನ್ (ಫಿಟ್ಟರ್) 02, ಆಪರೇಟರ್ 2, ಕ್ಲರ್ಕ್ 01 ಹಾಗೂ ಡ್ರೈವರ್ 1 ಹುದ್ದೆಗಳು ಖಾಲಿ ಇವೆ. ಡಿಪ್ಲೋಮಾ, ಐಟಿಐ ಫಿಟ್ಟರ್, ಕಾಮರ್ಸ್ ಡಿಗ್ರಿ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಎರಡು ವರ್ಷಗಳ ಕಾರ್ಯಾನುಭವವನ್ನು ಕೇಳಲಾಗಿದೆ.
ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 30 ಸಾವಿರ ರೂಪಾಯಿಯಿಂದ 40 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಎಲ್ಲ ಅಭ್ಯರ್ಥಿಗಳಿಗೆ 500 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು https://celindia.co.in/ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ನಿಗದಿತ ದಿನಾಂಕದೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.