ಬೆಂಗಳೂರು: ಛತ್ತೀಸ್ ಗಢದ ಬಿಲಾಸ್ ಪುರದಲ್ಲಿರುವ ಆಲ್ ಇಂಡಿಯಾ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 90 ಪೋಸ್ಟ್ ಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸಂಸ್ಥೆಲ್ಲಿ ಕಾರ್ಯನಿರ್ವಹಿಸಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 90 ಪ್ರಾಧ್ಯಾಪಕರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ಹುದ್ದೆಯ ಹೆಸರು: ಪ್ರಾಧ್ಯಾಪಕರು, ಹೆಚ್ಚುವರಿ ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು ಇತ್ಯಾದಿ
ಒಟ್ಟು ಹುದ್ದೆ: 90
ಉದ್ಯೋಗ ಸ್ಥಳ: ಬಿಲಾಸ್ ಪುರ, ಛತ್ತೀಸ್ ಗಢ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್, ಆಫ್ ಲೈನ್
ಆನ್ ಲೈನ್ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 22
ಆಫ್ ಲೈನ್ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 29
ಪ್ರಾಧ್ಯಾಪಕರು, ಹೆಚ್ಚುವರಿ ಪ್ರಾಧ್ಯಾಪಕರು, ಅಸೋಸಿಯೇಟ್ ಪ್ರಾಧ್ಯಾಪಕರು ಮತ್ತು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಮೊದಲಿಗೆ ಸೆಪ್ಟೆಂಬರ್ 22ರೊಳಗೆ ಆನ್ಲೈನ್ ಅರ್ಜಿ ಸಲ್ಲಿಸಬೇಕು. ಈ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅಭ್ಯರ್ಥಿಗಳು ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು 29 ಸೆಪ್ಟೆಂಬರ್ ರಂದು ಸಂಜೆ 5 ಗಂಟೆಯೊಳಗೆ AIIMS ಬಿಲಾಸ್ಪುರಕ್ಕೆ ಕಳುಹಿಸಬೇಕಾಗುತ್ತದೆ.
ಏಮ್ಸ್ ನಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅಧಿಕೃತ ವೆಬ್ ಸೈಟ್ ಆಗಿರುವ https://aiimsbilaspur.edu.in/ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 1.01 ಲಕ್ಷ ರೂಪಾಯಿಯಿಂದ 2.2 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಎಸ್ ಸಿ ಮತ್ತು ಎಸ್ ಟಿ ಸಮುದಾಯದ ಅಭ್ಯರ್ಥಿಗಳು 1,180 ರೂ. ಶುಲ್ಕ ಪಾವತಿಸಬೇಕಾಗುತ್ತದೆ, ಒಬಿಸಿ ವರ್ಗಗಳ ಅಭ್ಯರ್ಥಿಗಳಿಗೆ 2,360 ರೂ. ಶುಲ್ಕ ನಿಗದಿಪಡಿಸಲಾಗಿದೆ. ದಿವ್ಯಾಂಗ (ಪಿಡಬ್ಲ್ಯೂಪಿಡಿ) ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ.