ಬೆಂಗಳೂರು: ಕೇಂದ್ರ ಸರ್ಕಾರದ ಹುದ್ದೆಗಳನ್ನು ಪಡೆಯಬೇಕು, ಜೀವನದಲ್ಲಿ ಯಶಸ್ವಿ ವ್ಯಕ್ತಿ ಎನಿಸಿಕೊಳ್ಳಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಶುಭ ಸುದ್ದಿ ಇಲ್ಲಿದೆ. ಭಾರತೀಯ ರೈಲ್ವೆ ಇಲಾಖೆಯ ನಾರ್ತ್ ಈಸ್ಟ್ ಫ್ರಂಟಿಯರ್ ವಲಯದಲ್ಲಿ ಖಾಲಿ ಇರುವ 358 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಸೆಪ್ಟೆಂಬರ್ 29 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಹುದ್ದೆಗಳ ವಿವರ
ಹುದ್ದೆಯ ಹೆಸರು: ನಾರ್ತ್ ಈಸ್ಟ್ ಫ್ರಂಟಿಯರ್ ವಲಯ
ಒಟ್ಟು ಹುದ್ದೆ: 358
ಉದ್ಯೋಗ ಸ್ಥಳ: ಅಸ್ಸಾಂ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 29
ಟಿಕೆಟ್ ಕಲೆಕ್ಟರ್, ಸ್ಟೇಷನ್ ಮಾಸ್ಟರ್, ಟಿಕೆಟ್ ಮೆಂಟೇನರ್, ಶಟಿಂಗ್ ಮಾಸ್ಟರ್, ಅಸಿಸ್ಟಂಟ್, ನರ್ಸಿಂಗ್ ಸ್ಟಾಫ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. 64 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ nfr.indianrailways.gov.in ಗೆ ಭೇಟಿ ನೀಡಬೇಕು
ಟಿಕೆಟ್ ಕಲೆಕ್ಟರ್ ಸೇರಿ ವಿವಿಧ ಹುದ್ದೆಗಳನ್ನು ಆಯ್ಕೆ ಮಾಡಿಕೊಳ್ಳಬೇಕು
ಅಧಿಸೂಚನೆಯನ್ನು ಓದಿ, ದಾಖಲೆ ಸಿದ್ಧಪಡಿಸಿಕೊಳ್ಳಬೇಕು
ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯ ಪ್ರತಿಯನ್ನು ಡೌನ್ ಲೋಡ್ ಮಾಡಿ ಇಟ್ಟುಕೊಳ್ಳಬೇಕು