ಬೆಂಗಳೂರು: ನೀವು ಎಸ್ಸೆಸ್ಸಲ್ಸಿ ಮುಗಿಸಿ ಸರ್ಕಾರಿ ಹುದ್ದೆಗಾಗಿ ಕಾಯುತ್ತಿದ್ದೀರಾ? ಅದರಲ್ಲೂ, ಉಡುಪಿಯಲ್ಲಿ ವೃತ್ತಿಜೀವನ ಆರಂಭಿಸಬೇಖು ಎಂದು ಬಯಸುತ್ತಿದ್ದೀರಾ? ಹಾಗಾದರೆ, ಒಳ್ಳೆಯ ಅವಕಾಶವೊಂದು ನಿಮ್ಮ ಮನೆ ಬಾಗಿಲಿಗೆ ಬಂದಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು 54 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ರಾಜ್ಯ ಪೊಲೀಸ್
ಒಟ್ಟು ಹುದ್ದೆಗಳು: 54
ಉದ್ಯೋಗ ಸ್ಥಳ: ಉಡುಪಿ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 30
ಮಾನ್ಯತೆ ಪಡೆದ ಯಾವುದೇ ಮಂಡಳಿಗಳಿಂದ ಎಸ್ಸೆಸ್ಸೆಲ್ಸಿ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. 58 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 36 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ನಂತರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಂಕಾತಿ ಮಾಡಿಕೊಳ್ಳಲಾಗುತ್ತದೆ.
ಯಾವ ಹುದ್ದೆ ಎಷ್ಟು ಖಾಲಿ?
ಮೋಟರ್ ಲಾಂಚ್ ಎಂಜಿನಿಯರ್ 01
ಬೋಟ್ ಕ್ಯಾಪ್ಟನ್ 12
ಅಸಿಸ್ಟಂಟ್ ಬೋಟ್ ಕ್ಯಾಪ್ಟನ್ 13
ಮೋಟರ್ ಲಾಂಚ್ ಮೆಕ್ಯಾನಿಕ್ 02
ಎಂಜಿನ್ ಡ್ರೈವರ್ 15
ಖಲಾಸಿ 11
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ksp-recruitment.in ವೆಬ್ ಸೈಟ್ ಗೆ ಭೇಟಿ ನೀಡಿ ಅಧಿಸೂಚನೆ ಓದಬೇಕು. ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಂಡು, ಅದನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ನಿಗದಿತ ದಿನಾಂಕದೊಳಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
Superintendent of Police, Coastal Security Police, Udupi & Member Secretary to Special Recruitment Committee, Karnataka