ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ರೈಲ್ ಇಂಡಿಯಾ ಟೆಕ್ನಿಕಲ್ ಆ್ಯಂಡ್ ಎಕನಾಮಿಕ್ ಸರ್ವಿಸಸ್ ಸಂಸ್ಥೆಯಲ್ಲಿ (RITES Recruitment 2025) ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಂಡಿವಿಜುವಲ್ ಕನ್ಸಲ್ಟಂಟ್ (ಸೀನಿಯರ್ ಮ್ಯಾನೇಜರ್) ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರೈಲ್ ಇಂಡಿಯಾ ಟೆಕ್ನಿಕಲ್ ಆ್ಯಂಡ್ ಎಕನಾಮಿಕ್ ಸರ್ವಿಸಸ್ ಸಂಸ್ಥೆಯಲ್ಲಿ (RITES)
ಒಟ್ಟು ಹುದ್ದೆಗಳು: 01
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 28
ಉದ್ಯೋಗ ಸ್ಥಳ: ಮಹಾರಾಷ್ಟ್ರ
ಮಹಾರಾಷ್ಟ್ರದ ಮುಂಬೈನಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪದವಿ, ಬಿ.ಇ, ಬಿ.ಟೆಕ್ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 50 ವರ್ಷ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ.
ನೇಮಕಾತಿ ಹೊಂದಿದವರಿಗೆ ಮಾಸಿಕ 81,500 ರೂಪಾಯಿ ಸಂಬಳ ನೀಡಲಾಗುತ್ತದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು rites.com ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮೊದಲಿಗೆ ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ, ನೇಮಕಾತಿ ನಡೆಸಲಾಗುತ್ತದೆ.
ಸಂದರ್ಶನದ ವಿವರ
ಸೆಪ್ಟೆಂಬರ್ 30ರಂದು ದೇಶದ ಎರಡು ಕಡೆ ಸಂದರ್ಶನ ನಡೆಸಲಾಗುತ್ತದೆ. RITES Corporate Office, Shikhar, Plot No.01, Sector-29, Gurugram-122001 ಹಾಗೂ RITES Regional Office, Mumbai, 5th Floor, Regent Chamber, Nariman Point, Mumbai – 400021 ವಿಳಾಸದಲ್ಲಿ ಸಂದರ್ಶನ ನಡೆಸಲಾಗುತ್ತದೆ.