ರಾಮನಗರ: ಚನ್ನಪಟ್ಟಣ ತಾಲೂಕು ಕಚೇರಿಯಲ್ಲಿ ಭ್ರಷ್ಟಾಚಾರವಾಗುತ್ತಿದೆ ಎಂದು ಆರೋಪಿಸಿ ರೈತಸಂಘದಿಂದ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣದ ತಾಲೂಕು ಕಚೇರಿಯಲ್ಲಿ ಪ್ರತಿಯೊಂದಕ್ಕೂ ಹಣ ಕೇಳುತ್ತಾರೆ. ರೈತರ ಪಹಣಿ, ಕಂದಾಯ ದಾಖಲೆ ಪಡೆಯಲು ಲಂಚ, ರೈತರ ಪಹಣಿ, ಕಂದಾಯ ದಾಖಲೆ ಪಡೆಯಲು ಲಂಚ ಕೇಳುತ್ತಾರೆ.
ಇದರಿಂದ ನಮಗೆ ಸಮಸ್ಯೆ ಆಗುತ್ತಿದೆ. ನೀವು ಯಾಕೆ ಅಧಿಕಾರಿಗಳಾಗಿದ್ದೀರಿ, ನಮ್ಮ ಸಮಸ್ಯೆಗೆ ಪರಿಹಾರ ಏನು ? ಎಂದು ಉಪತಹಶೀಲ್ದಾರ್ ಲಕ್ಷ್ಮಿದೇವಮ್ಮಗೆ ರೈತರು ತರಾಟೆ ತೆಗೆದುಕೊಂಡಿದ್ದಾರೆ. ಲಂಚ ನಿಲ್ಲದಿದ್ದರೆ, ಉಗ್ರ ಹೋರಾಟ ಮಾಡುತ್ತೇವೆ ಎಂದು ಅಧಿಕಾರಿಗಳಿಗೆ ರೈತರು ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಹತ್ತಾರು ಜನ ರೈತರು ಭಾಗಿಯಾಗಿದ್ದರು.



















