ಬೈಂದೂರು : ಬೈಂದೂರು ಕ್ಷೇತ್ರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಆಚರಣೆ ಜೆ.ಎನ್.ಆರ್ ಸಭಾಭವನದಲ್ಲಿ ನಡೆಯಿತು.
ಸಾರ್ವಜನಿಕರಿಗಾಗಿ ನಾರಾಯಣ ಗುರುಗಳ ಬಗ್ಗೆ ಚಿತ್ರಕಲಾ ಸ್ಪರ್ಧೆ, ಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಕುಣಿತ ಭಜನಾ ಸ್ಪರ್ಧೆ, ಜಾನಪದ ನೃತ್ಯ ವೈಭವ ಸ್ಪರ್ಧೆ ಒಳಗೊಂಡಂತೆ ಹಲವು ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಪ್ರಥಮ, ದಿತೀಯ ಹಾಗೂ ತೃತೀಯ ಬಹುಮಾನ ನೀಡಿ ಗೌರವಿಸಲಾಯಿತು.
ಶಾಸಕ ಗುರುರಾಜ ಗಂಟಿಹೊಳೆ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ನಾರಾಯಣಗುರುಗಳ ವಿಚಾರಧಾರೆ ಸಾರ್ವಕಾಲೀಕ ಶ್ರೇಷ್ಠ ತತ್ವಾದರ್ಶಗಳು ಸಮಾಜದಲ್ಲಿ ಸಾಮರಸ್ಯ ಮೂಡಿಸಲು ಸಹಕಾರಿಯಾಗಿದೆ. ಅವರ ವಿಚಾರಧಾರೆಗಳು ಸಾರ್ವಕಾಲೀಕ ಶ್ರೇಷ್ಠವಾಗಿದ್ದು, ಜನರು ತಮ್ಮ ಜೀವನದಲ್ಲಿ ಅದನ್ನು ಅಳವಡಿಸಿಕೊಂಡಾಗ ಸಾರ್ಥಕವಾಗುತ್ತದೆ ಎಂದು ಹೇಳಿದರು.
ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಶಿವರಾಜ ಪೂಜಾರಿ ಗೋಳಿಹೊಳೆ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾರಾಯಣಗುರುಗಳು ಶೋಷಿತ ಸಮಾಜದ ಏಳಿಗೆಗಾಗಿ ದುಡಿದ ಮಾಹನ್ ದಾರ್ಶನಿಕರಾಗಿದ್ದರು. ಅವರ ವಿಚಾರಧಾರೆಗಳನ್ನು ಯುವ ಪಿಳಿಗಿಗೆ ತಲುಪಿಸಬೇಕು ಎಂಬ ಹಿನ್ನೆಲೆಯಲ್ಲಿ ಅವರ ಜನ್ಮ ಜಯಂತಿಯನ್ನು ವಿಶಿಷ್ಠವಾಗಿ ಆಚರಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಕ್ಷೇತ್ರ ಬಿಜೆಪಿ ಅಧ್ಯಕ್ಷೆ ಅನಿತಾ ಆರ್.ಕೆ, ವಿಧಾನಪರಿಷತ್ ಸದಸ್ಯರಾದ ಕಿಶೋರ್ ಕುಮಾರ್, ಹಿಂದುಳಿದ ವರ್ಗಗಳ ಜಿಲ್ಲಾ ಮೋರ್ಚಾದ ಅಧ್ಯಕ್ಷ ವಿಜಯ್ ಕಡೂರು, ಪ್ರಧಾನಕಾರ್ಯದರ್ಶಿಗಳಾದ ಕರುಣ್ ಪೂಜಾರಿ, ಗೋಪಾಲ ಪೂಜಾರಿ, ಹಿಂದುಳಿದ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕೊಠಾರಿ, ಜಿಲ್ಲಾ ಹಿಂದುಳಿದ ಮೋರ್ಚಾದ ಕಾರ್ಯದರ್ಶಿ ಚಂದ್ರ ಜೋಗಿ ಶಾನ್ಕಟ್ಟು, ಜಿಲ್ಲಾ ಹಿಂದುಳಿದ ಮೋರ್ಚಾದ ಉಪಾಧ್ಯಕ್ಷರಾದ ರಾಜಶೇಖರ ದೇವಾಡಿಗ, ವಿನೋದ್‌ಕುಮಾರ ಗುಜ್ಜಾಡಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಉಮೇಶ ಕಂಡ್ಲೂರು, ಬೈಂದೂರು ಪಟ್ಟಣ ಪಂಚಾಯಿತಿ ಹಿಂದುಳಿದ ಮೋರ್ಚಾದ ಅಧ್ಯಕ್ಷ ಚಂದ್ರಶೇಖರ ದೇವಾಡಿಗ, ಸಂತೋಷ ಪೂಜಾರಿ ನೇರಳಕಟ್ಟೆ, ಬೈಂದೂರು ಯುವಮೋರ್ಚಾದ ಅಧ್ಯಕ್ಷ ಗಜೇಂದ್ರ ಬೆಲೆಮನೆ, ಎಸ್‌ಸಿ ಮೋರ್ಚಾದ ಅಧ್ಯಕ್ಷ ಅಶೋಕ್ ಎನ್.ಡಿ., ಎಸ್ಟಿ ಮೋರ್ಚಾದ ಅಧ್ಯಕ್ಷ ರಾಮ ನಾಯ್ಕ, ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಅಂತೋನಿ ಡಿಸಿಲ್ವಾ, ರೈತಮೋರ್ಚಾದ ಅಧ್ಯಕ್ಷ ಪ್ರಕಾಶ ಶೆಟ್ಟಿ, ಮಹಿಳಾ ಮೋರ್ಚಾದ ಅಧ್ಯಕ್ಷೆ ಶ್ಯಾಮಲ ಕುಂದರ್, ರಾಜ್ಯ ಮೀನುಗಾರಿಕಾ ಪ್ರಕೋಷ್ಠದ ಆನಂದ ಖಾರ್ವಿ, ಒಬಿಸಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ವಿಠಲ ಪೂಜಾರಿ ಐರೋಡಿ, ಜಿಲ್ಲಾ ಒಬಿಸಿ ಮೋರ್ಚಾದ ಕಾರ್ಯದರ್ಶಿ ರವೀಂದ್ರ ತಿಂಗಳಾಯ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಜಿಲ್ಲಾ ಒಬಿಸಿ ಮೋರ್ಚಾದ ಕಾರ್ಯದರ್ಶಿ ಸಂತೋಷ ಪೂಜಾರಿ ಉಪಸ್ಥಿತರಿದ್ದರು.
ಬೈಂದೂರು ಒಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುನಾಥ ದೇವಾಡಿಗ ನಿರೂಪಿಸಿದರು.

