ಬೆಂಗಳೂರು: ಬಿಪಿಎಲ್ ಕಾರ್ಡ್ ರದ್ದು ಮಾಡುವ ವಿಚಾರಕ್ಕೆ ಆಹಾರ ನಾಗರೀಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಮುನಿಯಪ್ಪ, ದಕ್ಷಿಣ ಭಾರತದಲ್ಲಿ ಬಿಪಿಎಲ್ ಕಾರ್ಡ್‌ಗಳು ಕರ್ನಾಟಕದಲ್ಲೇ ಹೆಚ್ಚು ಇರುವುದು. 75% ಬಿಪಿಎಲ್ ಕಾರ್ಡ್‌ಗಳು ಕರ್ನಾಟಕದಲ್ಲಿ ಇದೆ.
ಹೀಗಾಗಿ ಬಿಪಿಎಲ್ ಕಾರ್ಡ್‌ಗಳ ಪರಿಷ್ಕರಣೆ ಮಾಡುವುದು ಅನಿವಾರ್ಯವಾಗಿದೆ. ಅನರ್ಹರು ಕಂಡು ಬಂದರೆ, ಕಾರ್ಡ್ ರದ್ದು ಮಾಡಲ್ಲ, ಅವರನ್ನ ಎಪಿಎಲ್ ಕಾರ್ಡ್‌ಗೆ ಸೇರಿಸಲಾಗುತ್ತದೆ. ಅಪ್ಪಿತಪ್ಪಿ ಅರ್ಹರ ಎಪಿಎಲ್ ಹೋದ್ರೆ 24 ಘಂಟೆಯೊಳಗೆ ಅರ್ಜಿ ಹಾಕಿದರೆ ಪಡಿತರ ವಿತರಣೆ ಮಾಡಲಾಗುತ್ತದೆ. ಮುಂದಿನ ತಿಂಗಳು ಬಿಪಿಎಲ್ ಕಾರ್ಡ್‌ಗಳಿಗೆ ಅರ್ಜಿ ಆಹ್ವಾನ ಮಾಡುತ್ತೇವೆ ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.



















