ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ವಜಾಗೊಳಿಸಿದೆ.
‘ನನ್ನ ವಿರುದ್ಧ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸಬೇಕು’ ಎಂದು ಕೋರಿ ಮುನಿರತ್ನ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಐ.ಅರುಣ್
ಅವರಿದ್ದ ಏಕಸದಸ್ಯ ನ್ಯಾಯಪೀಠ ಇಂದು (ಬುಧವಾರ) ವಿಚಾರಣೆ ನಡೆಸಿತು.
ಈ ಪ್ರಕರಣದಲ್ಲಿ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ವಿಶೇಷ ತನಿಖಾ ದಳ (ಎಸ್‌ಐಟಿ) ವಿಚಾರಣಾ ನ್ಯಾಯಾಲಯಕ್ಕೆ ಬಿ ಅಂತಿಮ ವರದಿ ಸಲ್ಲಿಸಿರುವುದನ್ನು ಪರಿಗಣಿಸಿದ ನ್ಯಾಯಪೀಠ ಅರ್ಜಿಗಳನ್ನು ವಜಾಗೊಳಿಸಿ ಆದೇಶಿಸಿದೆ.



















