ಬೆಂಗಳೂರು: ಕೇಂದ್ರ ಸರ್ಕಾರದ ನೆರವಿನಿಂದ ನಿರ್ವಹಿಸಲ್ಪಡುವ, ಸ್ವಾಯತ್ತ ಸಂಸ್ಥೆಯಾಗಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಪ್ಯಾಕೇಜಿಂಗ್ (IIP Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 25 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಡಿಷನಲ್ ಡೈರೆಕ್ಟರ್, ಅಸಿಸ್ಟಂಟ್ ಪ್ರೊಫೆಸರ್, ಕ್ಲರ್ಕ್, ಟೆಕ್ನಿಕಲ್ ಅಸಿಸ್ಟಂಟ್ ಸೇರಿ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಪ್ಯಾಕೇಜಿಂಗ್ (IIP)
ಹುದ್ದೆಗಳ ಹೆಸರು: ಅಡಿಷನಲ್ ಡೈರೆಕ್ಟರ್, ಅಸಿಸ್ಟಂಟ್ ಪ್ರೊಫೆಸರ್ ಇತ್ಯಾದಿ
ಒಟ್ಟು ಹುದ್ದೆಗಳು: 25
ಉದ್ಯೋಗ ಸ್ಥಳ: ಬೆಂಗಳೂರು ಸೇರಿ ದೇಶದ ಹಲವೆಡೆ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಕರ್ನಾಟಕದ ಬೆಂಗಳೂರು, ಲಖನೌ, ದೆಹಲಿ, ಕೋಲ್ಕತ್ತ, ಚೆನ್ನೈ, ಹೈದರಾಬಾದ್, ಮುಂಬೈ, ಅಹಮದಾಬಾದ್ ನಲ್ಲಿ ಇರುವ ಐಐಪಿ ಕೇಂದ್ರ ಕಚೇರಿಗಳಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಸ್ನಾತಕೋತ್ತರ ಪದವಿ, ಎಂ.ಫಿಲ್, ಪಿಎಚ್.ಡಿ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ.
ನೇಮಕಾತಿ ಹೊಂದಿದವರಿಗೆ ಮಾಸಿಕ 56,100 ರೂಪಾಯಿಯಿಂದ 1.77 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. 50 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://iisc.ac.in/ ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದು.



















