ಬೆಂಗಳೂರು: ಮತ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ 135 ಸ್ಥಾನಗಳಲ್ಲಿ ಗೆದ್ದಿದೆ. ಹಾಗಿದ್ದರೆ ಮತ ಕಳ್ಳತನದಿಂದ ಗೆದ್ದಿದೆಯಾ.? ರಾಹುಲ್ ಗಾಂಧಿ ಅವರನ್ನು ವಿಚಾರಣೆಗೆ ಒಳಪಡಿಸಬೇಕು.
ನಮ್ಮ ದೇಶದೊಳಗೆ ಆಂತರಿಕ ಕಲಹ ಹೆಚ್ಚಿಸಲು ಈ ರೀತಿ ಸುಳ್ಳು ಸುದ್ದಿ ಹೆಬ್ಬಿಸಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
ಚುನಾವಣಾ ಆಯೋಗ, ವಾಣಿಜ್ಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯ ಸೇರಿದಂತೆ ಇತರೆ ಸಂಸ್ಥೆಗಳ ಮೇಲಿಂದ ವಿಶ್ವಾಸ ಹೋಗುವ ರೀತಿಯಲ್ಲಿ ಕಾಂಗ್ರೆಸ್ ಪಕ್ಷ ಕೆಲಸ ಮಾಡುತ್ತಿದೆ. ಹೀಗಾಗಿ ಕೂಡಲೇ ರಾಹುಲ್ ಗಾಂಧಿಯನ್ನು ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.



















