ಬೆಂಗಳೂರು: ಮುಂಬರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಜಾತಿ ಜನಗಣತಿ ಪಟ್ಟಿಯಲ್ಲಿ ಕನಿಷ್ಠ 46 ಜಾತಿಗಳು ದ್ವಿ ಗುರುತುಗಳನ್ನು ಹೊಂದಿದ್ದು. ಕ್ರೈಸ್ತ ಬ್ರಾಹ್ಮಣ, ಕ್ರೈಸ್ತ ಒಕ್ಕಲಿಗ, ಕ್ರೈಸ್ತ ಕುರುಬ ಮೂಲಕ ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿ ಸೇರ್ಪಡೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ದೂರು ಹಿನ್ನೆಲೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪತ್ರವನ್ನು ಬರೆದಿದ್ದಾರೆ.
ಜಾತಿಪಟ್ಟಿಯಲ್ಲಿ ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಸೇರಿ ಹೊಸ ಜಾತಿ ಪಟ್ಟಿಗಳ ಸೇರ್ಪಡೆ ಹಿನ್ನೆಲೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ಪತ್ರ ಬರೆದು ಪರಿಶೀಲಿಸುವಂತೆ ಹೇಳಿದ್ದಾರೆ. ಕ್ರಿಶ್ಚಿಯನ್ ಹೊಸ ಜಾತಿಗಳ ಸೇರ್ಪಡೆಯಿಂದ ಸಾಮಾಜಿಕ ಧಕ್ಕೆ ಮತ್ತು ದೀರ್ಘಾವಧಿಯ ಸಮಸ್ಯೆ ಉಂಟಾಗುವ ಸಾಧ್ಯತೆ ಇರುತ್ತದೆ. ಸಾಮಾಜಿಕ ವ್ಯವಸ್ಥೆಗೆ ಸಮಸ್ಯೆಯಾಗದಂತೆ ಮರು ಪರಿಶೀಲಿಸುವಂತೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಿಳಿಸಿದ್ದಾರೆ.

“ಈ ಹಿಂದೆ ರಾಜ್ಯಪಾಲರಿಗೆ ದೂರು ನೀಡಿದ್ದ ಬಿಜೆಪಿ ನಿಯೋಗ”
ಮುಂಬರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಜಾತಿ ಜನಗಣತಿ ಪಟ್ಟಿಯಲ್ಲಿ ಕನಿಷ್ಠ 46 ಜಾತಿಗಳು ದ್ವಿ ಗುರುತುಗಳನ್ನು ಹೊಂದಿವೆ. ಕ್ರೈಸ್ತ ಬ್ರಾಹ್ಮಣ, ಕ್ರೈಸ್ತ ಒಕ್ಕಲಿಗ, ಕ್ರೈಸ್ತ ಕುರುಬ ಮೂಲಕ ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿ ಸೇರ್ಪಡೆ ಮಾಡಲಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಬಿಜೆಪಿ ನಾಯಕರು ಮತ್ತು ಇತರರ ನಿಯೋಗವು ಸೆಪ್ಟೆಂಬರ್ 16ರಂದು ರಾಜ್ಯಪಾಲರನ್ನು ಭೇಟಿಯಾಗಿ ದೂರು ನೀಡಿದ್ದರು. ಬಿಜೆಪಿ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಪಿ.ಸಿ.ಮೋಹನ್, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಸುನಿಲ್ ಕುಮಾರ್ ಸೇರಿದಂತೆ ಇತರರು “ಸಾಮಾಜಿಕ ನ್ಯಾಯ ಜಾಗೃತಿ ವೇದಿಕೆ” ಬ್ಯಾನರ್ ಅಡಿಯಲ್ಲಿ ಜಾತಿ ಜನಗಣತಿ ವಿಷಯದ ಕುರಿತು ವ್ಯಾಪಕ ಚರ್ಚೆ ನಡೆಸಿದ ನಂತರ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ದೂರು ಸಲ್ಲಿಕೆ ಮಾಡಿತ್ತು.

ಕುರುಬ ಕ್ರಿಶ್ಚಿಯನ್’, ‘ಬ್ರಾಹ್ಮಣ ಕ್ರಿಶ್ಚಿಯನ್’, ‘ವಕ್ಕಲಿಗ ಕ್ರಿಶ್ಚಿಯನ್’ ಮುಂತಾದ ದ್ವಿ ಗುರುತುಗಳನ್ನು ಹೊಂದಿರುವ ಜಾತಿಗಳು ಗೊಂದಲಕ್ಕೆ ಕಾರಣವಾಗಬಹುದು. ಇದು ದೊಡ್ಡ ಪ್ರಮಾಣದಲ್ಲಿ ಧಾರ್ಮಿಕ ಮತಾಂತರಕ್ಕೆ ಅವಕಾಶ ನೀಡಬಹುದು. ಹೀಗಾಗಿ ರಾಜ್ಯಪಾಲರು ಮಧ್ಯಪ್ರವೇಶಿಸಿ ಸರ್ಕಾರಕ್ಕೆ ಅಗತ್ಯ ಸೂಚನೆಗಳನ್ನು ನೀಡಬೇಕೆಂದು ಒತ್ತಾಯಿಸಿದ್ದರು