ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿರುವ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ (SJICR Recruitment 2025)ಯಲ್ಲಿ ಖಾಲಿ ಇರುವ 15 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 15 ಸ್ಟಾಫ್ ನರ್ಸ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 30ರವರೆಗೆ ಕಾಲಾವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ
ಒಟ್ಟು ಹುದ್ದೆಗಳು: 15
ಹುದ್ದೆಗಳ ಹೆಸರು: ಸ್ಟಾಫ್ ನರ್ಸ್
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 30
ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ನರ್ಸಿಂಗ್ ನಲ್ಲಿ ಡಿಪ್ಲೋಮಾ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಗರಿಷ್ಠ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 22 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಒಂದು ಸಾವಿರ ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಉಳಿದವರಿಗೆ 2 ಸಾವಿರ ರೂಪಾಯಿ ಅರ್ಜಿ ಶುಲ್ಕವಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು jayadevacardiology.com ವೆಬ್ ಸೈಟ್ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದು.
ಅರ್ಜಿ ಕಳುಹಿಸಬೇಕಾದ ವಿಳಾಸ
ನಿರ್ದೇಶಕರು, ಆಡಳಿತ ಕಚೇರಿ, 1 ನೇ ಮಹಡಿ SJICR, ಬನ್ನೇರುಘಟ್ಟ ರಸ್ತೆಯಲ್ಲಿರುವ ಮುಖ್ಯ ಶಾಖೆ, ಜಯನಗರ 9 ನೇ ಬ್ಲಾಕ್, ಬೆಂಗಳೂರು-560069