ಚಾಮರಾಜನಗರ: ಮಹಾಲಯ ಅಮಾವಾಸ್ಯೆ ಹಿನ್ನೆಲೆ ಮಾದಪ್ಪನ ಸನ್ನಿಧಾನಕ್ಕೆ ಲಕ್ಷಾಂತರ ಭಕ್ತಗಣ ಆಗಮಿಸುತ್ತಿದ್ದು, ಮಾದಪ್ಪನ ಕೃಪೆಗೆ ಪಾತ್ರರಾಗುತ್ತಿದ್ದಾರೆ. ಇಂದು ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ಜೊತೆಗೆ ಮಾದಪ್ಪನಿಗೆ ವಿಶೇಷ ಪೂಜಾ ಕೈಂಕರ್ಯ ಕೂಡ ನೆರವೇರಿಸಲಾಗುತ್ತಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಮಾವಾಸ್ಯೆ ದಿನದಂದು ಮಾದಪ್ಪನ ದರ್ಶನ ಪಡೆದು ಬೇಡಿಕೊಂಡರೆ ಅಂದುಕೊಂಡ ಕೆಲಸಗಳು ನೆರವೇರಲಿದೆ ಎಂಬ ನಂಬಿಕೆ ಇದೆ. ಈ ಹಿನ್ನೆಲೆ ಇಂದು ವಿಶೇಷವಾಗಿ ಮಾದಪ್ಪನ ದರ್ಶನ ಪಡೆದು ಭಕ್ತರು ಪುನೀತರಾಗುತ್ತಿದ್ದಾರೆ.
ನಿನ್ನೆ ರಾತ್ರಿಯಿಂದಲೇ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತ ಸಾಗರ ಬಿಡುಬಿಟ್ಟಿದ್ದು, ಭಕ್ತರಿಗಾಗಿ 2 ಲಕ್ಷ ಲಾಡು ತಯಾರಿಸಲಾಗಿದೆ, ಭಕ್ತರಿಗೆ ವಿಶೇಷ ದಾಸೋಹ ವ್ಯವಸ್ಥೆ ಮಾಡಲಾಗಿದೆ.