ಶಿವಮೊಗ್ಗ: ರಾಜ್ಯ ಸರ್ಕಾರ ನಡೆಸುತ್ತಿರುವ ಜಾತಿಗಣತಿಯನ್ನು ಮುಂದೂಡುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರನ್ನು ಭೇಟಿಯಾಗಿ ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪನವರು ಮನವಿ ಮಾಡಿದ್ದಾರೆ.
ರಾಜ್ಯ ಸರ್ಕಾರ ಮಾಡುತ್ತಿರುವ ಜಾತಿಗಣತಿಯನ್ನು ತಕ್ಷಣವೇ ಮುಂದೂಡಬೇಕು. ತರಾತುರಿಯಲ್ಲಿ 7 ಕೋಟಿಗೂ ಅಧಿಕ ಜನಸಂಖ್ಯೆಯ ಜನಗಣತಿಯನ್ನ ಕೇವಲ 15 ದಿನಗಳಲ್ಲಿ ಮಾಡಲು ಸಾಧ್ಯವೇ ಇಲ್ಲ. ಇದು ಯಾವುದೇ ಕಾರಣಕ್ಕೂ ಸಮಂಜಸವಲ್ಲ ಎಂದು ಜಿಲ್ಲಾಧಿಕಾರಿಗೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪನವರು ಮನವಿ ಮಾಡಿದ್ದಾರೆ.
ಶಾಲಾ-ಕಾಲೇಜುಗಳಿಗೆ ದಸರಾ ರಜೆ ಇದೆ, ಹಾಗಾಗಿ ತಮ್ಮ ಮೂಲಸ್ಥಳಲ್ಲಿ ಜನರು ಇರಲ್ಲ, ಹಬ್ಬದ ಆಚರಣೆಗೋ, ರಜೆಯ ಕಾರಣಕ್ಕೋ ಬೇರೆ ಬೇರೆ ಪ್ರವಾಸಿ ತಾಣಗಳ ವೀಕ್ಷಣೆಗೋ ತೆರಳಿರುತ್ತಾರೆ, ಹೀಗಾಗಿ ಸಮೀಕ್ಷೆಯನ್ನು ಸಮಗ್ರವಾಗಿ ನಡೆಸಲು ಸಾಧ್ಯವೇ ಇಲ್ಲ ಹಾಗಾಗಿ ಸಮೀಕ್ಷೆಯನ್ನು ಮುಂದೂಡಬೇಕು ಎಂದು ಮನವಿ ಮಾಡಿದರು.