ಬೆಳಗಾವಿ: ಸದಾಶಿವನಗರದ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವದ ಬಾಲಕಿಯರ ವಸತಿ ನಿಲಯದಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾರೆ.
ಗೋಕಾಕ ತಾಲೂಕಿನ ಘಟಪ್ರಭಾ ಗ್ರಾಮದ ಸುಮಿತ್ರಾ ಗೋಕಾಕ (19) ನೇಣಿಗೆ ಶರಣಾದ ನರ್ಸಿಂಗ್ ವಿದ್ಯಾರ್ಥಿನಿ.
ಬೆಳಗ್ಗೆ ಉಪಹಾರ ಸೇವಿಸಿ ಬಂದು ವಸತಿ ನಿಲಯದ ಕೊಠಡಿಗೆ ಹೋಗಿ ಬಾಗಿಲು ಲಾಕ್ ಮಾಡಿಕೊಂಡಿದ್ದ ವಿದ್ಯಾರ್ಥಿನಿ ಸುಮಿತ್ರಾ, ಬಳಿಕ ರೂಮ್‌ನಲ್ಲಿ ನೇಣುಬಿಗಿದುಕೊಂಡು ಸುಮಿತ್ರಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ನರ್ಸಿಂಗ್ ವಿದ್ಯಾಭ್ಯಾಸಕ್ಕೆಂದು ಕಳೆದ ತಿಂಗಳ ಹಿಂದಷ್ಟೇ ವಸತಿ ನಿಲಯಕ್ಕೆ ಬಂದು ದಾಖಲಾತಿ ಪಡೆದಿದ್ದಳು.
ಸ್ಥಳಕ್ಕೆ ಎಪಿಎಂಸಿ ಪೊಲೀಸರು, ಸಮಾಜ ಕಲ್ಯಾಣ ಇಲಾಖೆ ಡಿಡಿ ರಾಮನಗೌಡ ಕನ್ನೋಳಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ