ಬೆಂಗಳೂರು: ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ (KMF SHIMUL Recruitment 2025 Recruitment 2025) ದಲ್ಲಿ ಖಾಲಿ ಇರುವ 27 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 27 ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ (KMF SHIMUL)
ಒಟ್ಟು ಹುದ್ದೆಗಳು : 27
ಹುದ್ದೆ ಹೆಸರು: ಸಹಾಯಕ ವ್ಯವಸ್ಥಾಪಕ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 29
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಎಸ್ಸಿ ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಸಿಸ್ಟಂಟ್ ಮ್ಯಾನೇಜರ್, ಎಕ್ಸ್ ಟೆನ್ಶನ್ ಆಫೀಸರ್, ಜೂನಿಯರ್ ಸಿಸ್ಟಂ ಆಪರೇಟರ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 34,100 ರೂ.ನಿಂದ 99,400 ರೂ.ವರೆಗೆ ಸಂಬಳ ನೀಡಲಾಗುತ್ತದೆ. 18ರಿಂದ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದ್ದರೆ, ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು shimul.coop ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.



















