ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಉದ್ಯೋಗ ಹಿಡಿದು, ಒಳ್ಳೆಯ ಜೀವನ ಸಾಗಿಸಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ (BMRCL Recruitment 2025) ಖಾಲಿ ಇರುವ 8 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶಿರಸ್ತೇದಾರ ಹಾಗೂ ತಹಸೀಲ್ದಾರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್
ಒಟ್ಟು ಹುದ್ದೆಗಳು: 8
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್, ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 30
ಉದ್ಯೋಗ ಸ್ಥಳ: ಬೆಂಗಳೂರು
ಮೂವರು ತಹಸೀಲ್ದಾರ್ ಹಾಗೂ ಐವರು ಶಿರಸ್ತೇದಾರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 60 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಗರಿಷ್ಠ 62 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವವರು bmrc.co.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವವರು ಕೂಡ bmrc.co.in ಗೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಬೇಕು. ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
Deputy General Manager (HR), Bangalore Metro Rail Corporation Limited, III Floor, BMTC Complex, K.H. Road, Shanthinagar, Bengaluru – 560027



















