ಬೆಂಗಳೂರು: ಕರ್ನಾಟಕ ಸರ್ಕಾರದ ಅಧಿನದಲ್ಲಿರುವ ಕೊಡಗಿನ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅರ್ಜಿಗಳನ್ನು (Kodagu Agriculture Department Recruitment 2025) ಆಹ್ವಾನಿಸಲಾಗಿದೆ. ಅಸಿಸ್ಟಂಟ್ ಟೆಕ್ನಾಲಜಿ ಮ್ಯಾನೇಜರ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ? ನೇಮಕಾತಿ ಪ್ರಕ್ರಿಯೆ ಹೇಗಿದೆ? ಇಲ್ಲಿದೆ ಮಾಹಿತಿ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕೊಡಗು ಕೃಷಿ ಇಲಾಖೆ
ಒಟ್ಟು ಹುದ್ದೆಗಳು: 01
ಅರ್ಜಿ ಸಲ್ಲಿಕೆ ಮಾದರಿ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 30
ಉದ್ಯೋಗದ ಸ್ಥಳ: ಕೊಡಗು
ಕೊಡಗಿನಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಬಿಎಸ್ಸಿ ಹಾಗೂ ಎಂಎಸ್ಸಿ ಕೋರ್ಸ್ ಗಳನ್ನು ಮುಗಿಸಿದವರಿಗೆ ಇದು ಒಳ್ಳೆಯ ಅವಕಾಶವಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 25 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.
ಆನ್ ಲೈನ್ ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ kodagu.nic.in ಗೆ ಭೇಟಿ ನೀಡಬೇಕು
ಅಸಿಸ್ಟಂಟ್ ಟೆಕ್ನಾಲಜಿ ಮ್ಯಾನೇಜರ್ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಅರ್ಜಿ ಡೌನ್ ಲೋಡ್ ಮಾಡಿಕೊಳ್ಳಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಮೇತ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
Joint Director of Agriculture, KSFC Building, Kodagu District, Madikeri



















