ಬೆಂಗಳೂರು: ಮಲ್ಲೇಶ್ವರಂನ ಪೈಪ್ ಲೈನ್ ರೋಡ್‍ನಲ್ಲಿ ಇರುವ ಫರ್ನಿಚರ್ ಅಂಗಡಿಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.
ಮಧ್ಯರಾತ್ರಿ 2:30ರ ಸುಮಾರಿಗೆ ಅಂಗಡಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು ಐದು ಕೋಟಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಅಲ್ಲದೇ ಬೆಂಕಿ ಅಕ್ಕಪಕ್ಕದ ಅಪಾರ್ಟ್‍ಮೆಂಟ್‍ನ 3 ಮನೆಗಳಿಗೂ ಆವರಿಸಿದೆ. 13 ಅಗ್ನಿಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.
ಅಗ್ನಿ ಅವಘಡದ ವೇಳೆ ಅಂಗಡಿ ಒಳಗಡೆ ಸುಮಾರು 10 ಜನ ಕೆಲಸಗಾರರು ಮಲಗಿದ್ದರು. ಅಕ್ಕಪಕ್ಕದ ನಿವಾಸಿಗಳು ಅವರನ್ನು ಎಚ್ಚರಿಸಿದ್ದಾರೆ. ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ.
ಸದ್ಯ ಘಟನಾ ಸ್ಥಳಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


















