ಬೆಂಗಳೂರು: ಇಂದು ಮತ್ತು ನಾಳೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಎರಡು ದಿನ ರಾಜ್ಯದ ಎಲ್ಲಾ ಜಿಲ್ಲೆಗಳಿಗು ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರಿನಲ್ಲೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆ ಬೆಂಗಳೂರಿಗೂ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಗಾಳಿಯು ಗಂಟೆಗೆ 30ರಿಂದ 40ಕಿ.ಮೀ ವೇಗದಲ್ಲಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.