ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಚಾಪ್ಟರ್-1 ಸಿನಿಮಾ ಇದೇ ಅಕ್ಟೋಬರ್ 2 ರಂದು ವಿಶ್ವದಾದ್ಯಂತ ತೆರೆ ಕಾಣಲು ಸಿದ್ಧವಾಗಿದೆ. ಸದ್ಯ ಟ್ರೈಲರ್ ಮೂಲಕ ಗಮನ ಸೆಳೆದಿರುವ ಕಾಂತಾರ ಸಿನಿಮಾ ತಂಡ ಪ್ಯಾನ್ ಇಂಡಿಯಾ ಪ್ರಚಾರ ಕಾರ್ಯದಲ್ಲಿ ನಿರತವಾಗಿದೆ.
ಹೈದರಾಬಾದ್‌ನಲ್ಲಿ ಇವೆಂಟ್ ಇದೇ ಬರುವ ಸೆ.28 ರಂದು ನಡೆಯಲಿದೆ. ಈ ಇವೆಂಟ್‌ಗೆ ಮುಖ್ಯ ಅತಿಥಿಯಾಗಿ ನಟ ಜೂ.ಎನ್‌ಟಿಆರ್ ಭಾಗಿಯಾಗಲಿದ್ದಾರೆ.
ಜೂ.ಎನ್‌ಟಿಆರ್ ಹಾಗೂ ರಿಷಬ್ ಶೆಟ್ಟಿ ಅವರ ನಡುವೆ ಸಿನಿಮಾ ಕ್ಷೇತ್ರ ಸ್ನೇಹ ಹೊರತಾಗಿಯೂ ವೈಯಕ್ತಿಕವಾಗಿ ಉತ್ತಮವಾದ ಭಾಂದವ್ಯವನ್ನು ಹೊಂದಿದೆ. ಹೀಗಾಗಿ, ಕಾಂತಾರ ಸಿನಿಮಾದ ಪ್ರಮೋಷನ್‌ನಲ್ಲಿ ಜೂ.ಎನ್‌ಟಿಆರ್ ಭಾಗಿಯಾಗಲಿದ್ದಾರೆ. ಸೆ.28 ರಂದು ಹೈದರಾಬಾದ್‌ನಲ್ಲಿ ಅದ್ದೂರಿಯಾಗಿ ಕಾರ್ಯಕ್ರಮ ನಡೆಯಲಿದ್ದು, ನಟ, ನಿರ್ದೇಶಕ ರಿಷಬ್ ಶೆಟ್ಟಿ ಒಳಗೊಂಡಂತೆ ಇಡೀ ಸಿನಿ ತಂಡ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಲಿದೆ.