ಬೆಂಗಳೂರು: ರಾಜ್ಯ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಲು ಇಚ್ಛಿಸುವವರಿಗೆ ಸುವರ್ಣಾವಕಾಶ ಒದಗಿ ಬಂದಿದೆ. ಉತ್ತರ ಕನ್ನಡದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ (DHFWS Uttara Kannada Recruitment 2025) ಖಾಲಿ ಇರುವ 70 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಮೆಡಿಕಲ್ ಆಫೀಸರ್, ಸ್ಪೆಷಲಿಸ್ಟ್ ಡಾಕ್ಟರ್ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉತ್ತರ ಕನ್ನಡ
ಹುದ್ದೆ ಹೆಸರು: ಮೆಡಿಕಲ್ ಆಫೀಸರ್, ಸ್ಪೆಷಲಿಸ್ಟ್ ಡಾಕ್ಟರ್
ಒಟ್ಟು ಹುದ್ದೆ: 70
ಉದ್ಯೋಗ ಸ್ಥಳ: ಉತ್ತರ ಕನ್ನಡ, ಕರ್ನಾಟಕ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 9
ಸ್ಪೆಷಲಿಸ್ಟ್ ಡಾಕ್ಟರ್ 39, ಚೀಫ್ ಮೆಡಿಕಲ್ ಆಫೀಸರ್ 29 ಹಾಗೂ ಜಿಸಿ ಮೆಡಿಕಲ್ ಆಫೀಸರ್ ವಿಭಾಗದಲ್ಲಿ 2 ಹುದ್ದೆಗಳು ಖಾಲಿ ಇವೆ. ಮೆರಿಟ್ ಲಿಸ್ಟ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 60 ಸಾವಿರ ರೂಪಾಯಿಯಿಂದ 1.3 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ uttarakannada.nic.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿ, ಅರ್ಜಿಯನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ District Health & Family Welfare Society Office, Karwar, Uttara Kannada ವಿಳಾಸಕ್ಕೆ ಕಳುಹಿಸಬೇಕು.



















