ಹೊಸಪೇಟೆ: ಮನೆಯಲ್ಲಿದ್ದ ಅಡುಗೆ ಅನಿಲ ಸಿಲಿಂಡರ್ ಸ್ಪೋಟಗೊಂಡು ಮನೆಯಲ್ಲಿದ್ದ 8 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ನಡೆದಿದೆ.
ನಿನ್ನೆ ಶಕ್ರವಾರ ರಾತ್ರಿ ಮನೆಯಲ್ಲಿ ಎಲ್ಲರೂ ಮಲಗಿರುವಾಗ ದುರಂತ ಸಂಭವಿಸಿದ್ದು, ಸ್ಪೋಟದ ರಭಸಕ್ಕೆ ಮನೆಯ ಗೋಡೆಯೇ ಛಿದ್ರವಾಗಿದೆ.
ಬೆಳಗಿನ ಜಾವ ಸಿಲಿಂಡರ್ ಸ್ಪೋಟಗೊಂಡಿದ್ದು, ಮನೆಯಲ್ಲಿದ್ದ ಹಾಲಪ್ಪ, ಸೋದರ ಮೈಲಾರಪ್ಪ ಸೇರಿ 8 ಜನರಿಗೆ ಗಾಯವಾಗಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಸಂಜೀವಿನಿ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.