ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಒಳ್ಳೆಯ ಅವಕಾಶ ಬಂದಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 4 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಿಸಿನೆಸ್ ಕರೆಸ್ಪಾಂಡೆಂಟ್ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆ ಹೆಸರು: ಬಿಸಿನೆಸ್ ಕರೆಸ್ಪಾಂಡೆಂಟ್ ಸೂಪರ್ ವೈಸರ್
ಒಟ್ಟು ಹುದ್ದೆ: 04
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 6
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಟೆಕ್, ಬಿ.ಇ, ಎಂಎಸ್ಸಿ, ಎಂಬಿಎ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಕನಿಷ್ಠ 21ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 15 ಸಾವಿರ ರೂ. ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ದೇಶದ ಆಯಾ ಪ್ರಾದೇಶಿಕ ಬ್ರ್ಯಾಂಚ್ ಗಳಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ centralbank.bank.in. ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿ, ಅರ್ಜಿಯನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
Central Bank of India, Regional Office, Mhow Neemuch Road – RATLAM-457001
……………