ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಾಧೀಕರಣ (NCLT Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 96 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಸೀನಿಯರ್ ಲೀಗಲ್ ಅಸಿಸ್ಟಂಟ್, ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
“ಹುದ್ದೆಗಳ ಸಂಕ್ಷಿಪ್ತ ವಿವರ”
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಾಧೀಕರಣ (NCLT)
ಒಟ್ಟು ಹುದ್ದೆಗಳು: 96
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 4
ಹುದ್ದೆಗಳ ಹೆಸರು: ಸೀನಿಯರ್ ಲೀಗಲ್ ಅಸಿಸ್ಟಂಟ್, ಸ್ಟಾಫ್ ಕಾರ್ ಡ್ರೈವರ್
ಉದ್ಯೋಗ ಸ್ಥಳ: ದೇಶಾದ್ಯಂತ
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಲ್ ಎಲ್ ಬಿ ಹಾಗೂ ಎಸ್ಸೆಸ್ಸೆಲ್ಸಿ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 56 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಒಬಿಸಿಯವರಿಗೆ 3 ವರ್ಷ ಹಾಗೂ ಎಸ್ಸಿ, ಎಸ್ಟಿ ಸಮುದಾಯದವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 2.09 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು https://nclt.gov.in/ ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅರ್ಜಿಯನ್ನು ಡೌನ್ ಲೋಡ್ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
“ಅರ್ಜಿ ಸಲ್ಲಿಸಬೇಕಾದ ವಿಳಾಸ”
Secretary, NCLT, National Company Law Tribunal, 6th Floor, Block No. 3, C.G.O. Complex, Lodhi Road, New Delhi – 110003


















