ಬೀದರ್: ಉತ್ತರ ಕರ್ನಾಟಕ ಭಾಗದಲ್ಲಿ ಭಾರಿ ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿಉಂಟಾಗಿದೆ. ಆದ್ದರಿಂದ ಇಂದು (ಸೋಮವಾರ) ಬೀದರ್ ಜಿಲ್ಲೆಗೆ ಬಿಜೆಪಿ ನಾಯಕರು ಬೇಟಿ ನೀಡಿ ಬೆಳೆ ಹಾನಿ ಪ್ರದೇಶಗಳನ್ನು ವೀಕ್ಷಣೆ ಮಾಡಿದ್ದಾರೆ.
ಬೀದರ್ ತಾಲೂಕಿನ ಇಸ್ಲಾಂಪುರ ಗ್ರಾಮದ ಜಮೀನುಗಳಿಗೆ ಟ್ರ್ಯಾಕ್ಟರ್‌ನಲ್ಲಿ ತೆರಳಿ ಮಳೆ ನೀರು ನಿಂತು ಕೆರೆಯಂತಾದ ಜಮೀನುಗಳನ್ನು ವೀಕ್ಷಿಸಿದ್ದಾರೆ. ಮಳೆಯಿಂದಾದ ಬೆಳೆ ಹಾನಿಯ ಬಗ್ಗೆ ವಿಜಯೇಂದ್ರ ಮತ್ತು ಛಲವಾದಿ ನಾರಾಯಣಸ್ವಾಮಿಗೆ ಶಾಸಕ ಶೈಲೇಂದ್ರ ಬೆಲ್ದಾಳೆ ವಿವರಿಸಿದ್ದಾರೆ.
ಬೀದರ್ ತಾಲೂಕಿನ ಕಾಶಂಪುರ ಗ್ರಾಮದಲ್ಲಿ ನಿರಂತರ ಮಳೆಯಿಂದಾಗಿ ಕಟಾವಿಗೆ ಬಂದಿದ್ದ ಉದ್ದು, ಸೋಯಾಬಿನ್, ಹೆಸರು ಬೆಳೆ ಹಾನಿಯಾಗಿದ್ದ ಪ್ರದೇಶಗಳಿಗೆ ಬಿ.ವೈ. ವಿಜಯೇಂದ್ರ, ಛಲವಾಧಿ ನಾರಾಯಣಸ್ವಾಮಿ ಭೇಟಿ ನೀಡಿ ಬೆಳೆ ಹಾನಿ ವೀಕ್ಷಣೆ ಮಾಡಿ, ರೈತರ ಸಮಸ್ಯೆಗಳನ್ನು ಆಲಿಸಿದ್ದಾರೆ ಹಾಗೂ ಇದೇ ವೇಳೆ ಕೃಷಿ ಇಲಾಖೆ ಅಧಿಕಾರಿಯಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ.
ಇನ್ನೂ, ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿದ್ದರಿಂದ ಸಾಲಭಾದೆ ತಾಳಲಾರದೆ ಇತ್ತೀಚೆಗೆ ಆತ್ಮಹತ್ಯೆಗೆ ಶರಣಾಗಿದ್ದ, ಬೀದರ್ ತಾಲೂಕಿನ ಕಾಶಂಪುರ ಗ್ರಾಮದ ರೈತ ಮಹಿಳೆ ಗಂಗಮ್ಮ ಮಚಕೂರಿ ಮನೆಗೆ ಬೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಈ ವೇಳೆ ಬಿ.ವೈ.ವಿಜಯೇಂದ್ರಗೆ ಛಲವಾದಿ ನಾರಾಯಣಸ್ವಾಮಿ ಶಾಸಕರಾದ ಪ್ರಭು ಚೌಹಾಣ್, ಶೈಲೇಂದ್ರ ಬೆಲ್ದಾಳೆ ಸಾಥ್ ಕೊಟ್ಟಿದ್ದಾರೆ.