ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಹೆದ್ದಾರಿ ಹಾಗೂ ಮೂಲಸೌಕರ್ಯ ಅಭಿವೃದ್ಧಿ ನಿಗಮದಲ್ಲಿ (NHIDCL Recruitment 2025) ಖಾಲಿ ಇರುವ 34 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 34 ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಹೆದ್ದಾರಿ ಹಾಗೂ ಮೂಲಸೌಕರ್ಯ ಅಭಿವೃದ್ಧಿ ನಿಗಮ (NHIDCL)
ಒಟ್ಟು ಹುದ್ದೆಗಳು: 34
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 3
ಉದ್ಯೋಗ ಸ್ಥಳ: ದೇಶಾದ್ಯಂತ
ಟೆಕ್ನಿಕಲ್ ವಿಭಾಗದಲ್ಲಿ ಖಾಲಿ ಇರುವ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. NHIDCL ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಗಳನ್ನು ಪೂರ್ಣಗೊಳಿಸಿರಬೇಕು ಎಂದು ತಿಳಿಸಲಾಗಿದೆ. ಗರಿಷ್ಠ 34 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಒಬಿಸಿ ಸಮುದಾಯದವರಿಗೆ 3 ವರ್ಷ ಹಾಗೂ ಎಸ್ಸಿ, ಎಸ್ಟಿ ಸಮುದಾಯದವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಗೇಟ್ ಸ್ಕೋರ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 50 ಸಾವಿರ ರೂಪಾಯಿಯಿಂದ 1.6 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರು nhidcl.com ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.