ಬೆಂಗಳೂರು : ಎಐಸಿಸಿ ಅಧ್ಯಕ್ಷರೂ ಆಗಿರುವ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅನಾರೋಗ್ಯದಿಂದ ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದನ್ನು ಅವರ ಪುತ್ರ, ಕರ್ನಾಟಕ ಸರ್ಕಾರದ ಸಚಿವ ಪ್ರಿಯಾಂಕ್ ಖರ್ಗೆ ‘ಎಕ್ಸ್’ ಪೋಸ್ಟ್ ಮೂಲಕ ತಿಳಿಸಿದ್ದಾರೆ.
ಖರ್ಗೆ ಅವರಿಗೆ ಪೇಸ್ ಮೇಕರ್ ಅಳವಡಿಸಲು ಸೂಚಿಸಲಾಗಿದೆ. ಶಸ್ತ್ರಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ. ನಿಮ್ಮೆಲ್ಲರ ಕಾಳಜಿ ಹಾಗೂ ಹಾರೈಕೆಗೆ ಧನ್ಯವಾದಗಳು ಎಂದು ಅವರು ಬರೆದುಕೊಂಡಿದ್ದಾರೆ.
ಗುರುವಾರ ಖರ್ಗೆ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.