ಬೆಂಗಳೂರು : ಸಿನಿಮಾ ಸ್ಟೈಲ್ನಲ್ಲಿ ಜಿಮ್‌ಗೆ ನುಗ್ಗಿದ ಐವರು ಜಿಮ್ ಟ್ರೈನರ್ ಮೇಲೆಯೇ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಅನಂತನಗರದ ರಿಪ್ಡ್ ಜಿಮ್‌ನಲ್ಲಿ ನಡೆದಿದೆ.
ಆನೇಕಲ್ ನಿವಾಸಿ ಸಂದೀಪ್ ಹಲ್ಲೆಗೊಳಗಾದ ಜಿಮ್ ಟ್ರೈನರ್.
ಸೆಪ್ಟೆಂಬರ್ 23ರಂದು ನಡೆದಿರುವ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜಿಮ್ ಟ್ರೈನರ್ ಮೇಲಿನ ಹಲ್ಲೆಯ ದೃಶ್ಯ ಸಿಸಿಟಿವಿ ಕ್ಯಾಮಾರಾದಲ್ಲಿ ಸೆರೆಯಾಗಿದ್ದು, ಸದ್ಯ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಹಲ್ಲೆ ನಡೆಸಿದ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಅರುಣ್, ಗೌತಮ್, ಅನುಷಾ, ಮೇಘನಾ ಸೇರಿ ಐವರು ಜಿಮ್ ಟ್ರೈನರ್ ಸಂದೀಪ್ ಮೇಲೆ ಹಲ್ಲೆ ನಡೆಸಿದ್ದಾರೆ. ಅನುಷಾ ಜಿಮ್ ಟ್ರೈನರ್ ಸಂದೀಪ್ ಕ್ಲೈಂಟ್ ಆಗಿದ್ದು, ಇಬ್ಬರು ಸ್ನೇಹಿತರಾಗಿದ್ದರು. ವಾಟ್ಸಾಪ್‌ನಲ್ಲಿ ಚಾಟಿಂಗ್ ಕೂಡ ಮಾಡುತ್ತಿದ್ದರು.ಅನುಷಾ ಮೊಬೈಲ್ ಚೆಕ್ ಮಾಡಿದಾಗ ಇವರಿಬ್ಬ ಸ್ನೇಹದ ಬಗ್ಗೆ ಅನುಷಾಳ ಸಹೋದರರಾದ ಗೌತಮ್ ಮತ್ತು ಅರುಣ್ಗೆ ಗೊತ್ತಾಗಿದೆ. ಆ ಬಳಿಕ ಅನುಷಾ ಮೊಬೈಲ್ ಹ್ಯಾಕ್ ಮಾಡಲಾಗಿದೆ ಎಂದು ಆರೋಪಿಸಿ ಜಿಮ್‌ಗೆ ನುಗ್ಗಿ ಮನಸೋ ಇಚ್ಛೆ ಹಲ್ಲೆ ಮಾಡಲಾಗಿದೆ.
ಸದ್ಯ ಘಟನಾ ಸಂಬಂಧ ಐವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಗಂಭೀರವಾಗಿ ಗಾಯಗೊಂಡ ಸಂದೀಪ್ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.