ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ಕಂಪನಿಯಲ್ಲಿ ಸರ್ಕಾರಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಒಳ್ಳೆಯ ಅವಕಾಶ ಸಿಕ್ಕಿದೆ. ಕೇಂದ್ರ ಸರ್ಕಾರದ ಸೋಲಾರ್ ಎನರ್ಜಿ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿ (SECI Recruitment 2025) ಖಾಲಿ ಇರುವ 22 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ? ಹುದ್ದೆಗಳ ವಿವರ ಸೇರಿ ವಿವಿಧ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಸೋಲಾರ್ ಎನರ್ಜಿ ಕಾರ್ಪೊರೇಷನ್ ಆಫ್ ಇಂಡಿಯಾ (SECI)
ಒಟ್ಟು ಹುದ್ದೆಗಳು: 22
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 24
ಉದ್ಯೋಗ ಸ್ಥಳ: ದೇಶಾದ್ಯಂತ
ಸೀನಿಯರ್ ಮ್ಯಾನೇಜರ್, ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್, ಅಡಿಷನಲ್ ಜನರಲ್ ಮ್ಯಾನೇಜರ್, ಡೆಪ್ಯೂಟಿ ಜನರಲ್ ಮ್ಯಾನೇಜರ್ ಹಾಗೂ ಜೂನಿಯರ್ ಸೂಪರ್ ವೈಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಡಿಗ್ರಿ, ಡಿಪ್ಲೋಮಾ, ಬಿ.ಇ, ಬಿ.ಟೆಕ್ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 48 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಒಬಿಸಿಯವರಿಗೆ 3 ವರ್ಷ ಹಾಗೂ ಎಸ್ಸಿ, ಎಸ್ಟಿ ಸಮುದಾಯದವರಿಗೆ 5 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 2.60 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು seci.co.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು.