ಬೆಂಗಳೂರು: ನೀವು ಬೆಂಗಳೂರಿನಲ್ಲೇ ಸರ್ಕಾರಿ ಉದ್ಯೋಗ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ರಾಜ್ಯ ಸರ್ಕಾರದ ಕರ್ನಾಟಕ ಜೀವವೈವಿಧ್ಯ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ (Karnataka Biodiversity Board Recruitment 2025) ಅಧಿಸೂಚನೆ ಹೊರಡಿಸಲಾಗಿದೆ. ಅಡ್ವೊಕೇಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ಜೀವವೈವಿಧ್ಯ ಮಂಡಳಿ
ಒಟ್ಟು ಹುದ್ದೆಗಳು: ವಿವಿಧ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 24
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಬಯಸುವ ಅಬ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಲ್ ಎಲ್ ಬಿ ಕೋರ್ಸ್ ಮುಗಿಸಿರಬೇಕು. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಆಸಕ್ತಿ ಇರುವ ಅಭ್ಯರ್ಥಿಗಳು ಮೊದಲಿಗೆ kbb.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಿ, ಅಧಿಸೂಚನೆ ಓದಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಈ ಕೆಳಗಿನ ವಿಳಾಸಕ್ಕೆ ನಿಗದಿತ ಅವಧಿಯೊಳಗೆ ಪೋಸ್ಟ್ ಮಾಡಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
ಸದಸ್ಯ ಕಾರ್ಯದರ್ಶಿ
ಕರ್ನಾಟಕ ಜೀವವೈವಿಧ್ಯ ಮಂಡಳಿ,
ನೆಲ ಮಹಡಿ, ವನವಿಕಾಸ್, 18ನೇ ಕ್ರಾಸ್,
ಮಲ್ಲೇಶ್ವರಂ, ಬೆಂಗಳೂರು – 560003.



















