ನವದೆಹಲಿ : AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅನಾರೋಗ್ಯ ಹಿನ್ನಲೆ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಅವರಿಗೆ ಪೇಸ್ ಮೇಕರ್ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಈ ಬಗ್ಗೆ ಮಲ್ಲಿಕಾರ್ಜುನ್ ಖರ್ಗೆ ಪುತ್ರ, ಸಚಿವ ಪ್ರಿಯಾಂಕ್ ಖರ್ಗೆ ಅವರು ತಂದೆಗೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಬೆನ್ನಲೇ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಫೋನ್ ಕರೆ ಮೂಲಕ ಮಲ್ಲಿಕಾರ್ಜುನ್ ಖರ್ಗೆ ಆರೋಗ್ಯ ವಿಚಾರಿಸಿದ್ದಾರೆ. ಈ ಸಂಬಂಧ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ‘ಖರ್ಗೆ ಜಿ ಅವರೊಂದಿಗೆ ಮಾತನಾಡಿದೆ. ಅವರ ಆರೋಗ್ಯದ ಬಗ್ಗೆ ವಿಚಾರಿಸಿದೆ ಮತ್ತು ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದೆ. ಅವರ ನಿರಂತರ ಯೋಗಕ್ಷೇಮ ಮತ್ತು ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತೇನೆ’ ಎಂದು ಹೇಳಿದ್ದಾರೆ.
ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿ ಜಯಂತಿ ಹಿನ್ನೆಲೆ ಇಂದು ಬೆಳಗ್ಗೆ ರಾಜ್‌ಘಾಟ್‌ಗೆ ಭೇಟಿ ನೀಡಿ ಮಹಾತ್ಮ ಗಾಂಧಿ ಅವರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ್ದಾರೆ. ಜೊತೆಗೆ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 121ನೇ ಜನ್ಮ ದಿನಾಚರಣೆ ಹಿನ್ನೆಲೆ ಅವರ ಸ್ಮಾರಕಕ್ಕೂ ಪ್ರಧಾನಿ ಮೋದಿ ಅವರು ಪುಷ್ಪ ನಮನ ಸಲ್ಲಿಸಿದ್ದಾರೆ.