ಬೆಂಗಳೂರು: ಕೇಂದ್ರ ಸರ್ಕಾರದ ಉದ್ಯೋಗ ಪಡೆಯಬೇಖು, ಭಾರತೀಯ ರೈಲ್ವೆಯಂತಹ ಪ್ರಮುಖ ಇಲಾಖೆಗಳಲ್ಲಿ ಕೆಲಸ ಮಾಡಬೇಕು ಎಂಬುದು ತುಂಬ ಜನರ ಕನಸಾಗಿರುತ್ತದೆ. ಈ ಕನಸನ್ನು ನನಸು ಮಾಡಿಕೊಳ್ಳುವ ಸಮಯ ಈಗ ಬಂದಿದೆ. ಹೌದು, ಭಾರತೀಯ ರೈಲ್ವೆ ಇಲಾಖೆಯ ವಾಯವ್ಯ ರೈಲ್ವೆ ವಲಯದಲ್ಲಿ (North Western Railway Recruitment 2025) 898 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಅಪ್ರೆಂಟಿಸ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತರು ಹಾಗೂ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ.
ಹುದ್ದೆಗಳ ಕುರಿತ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ವಾಯವ್ಯ ರೈಲ್ವೆ ವಲಯ
ಉದ್ಯೋಗ ಸ್ಥಳ: ಬಿಕಾನೇರ್, ಅಜ್ಮೀರ್, ಜೈಪುರ ಹಾಗೂ ಜೋಧ್ ಪುರ (ರಾಜಸ್ಥಾನ )
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 2
ಒಟ್ಟು ಹುದ್ದೆಗಳು: 898
ಎಸ್ಸೆಸ್ಸೆಲ್ಸಿ ಹಾಗೂ ಐಟಿಐ ಪಾಸಾದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. 24 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಎಸ್ಸಿ, ಎಸ್ಟಿ, ಮಹಿಳೆಯರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಉಳಿದೆಲ್ಲ ಸಮುದಾಯದವರಿಗೆ 100 ರೂಪಾಯಿ ಅರ್ಜಿ ಶುಲ್ಕವಿದೆ. ಮೊದಲಿಗೆ ಮೆರಿಟ್ ಲಿಸ್ಟ್ ಪ್ರಕಟಿಸಲಾಗುತ್ತದೆ. ನಂತರ ವೈದ್ಯಕೀಯ ಪರೀಕ್ಷೆ ಹಾಗೂ ದಾಖಲೆ ಪರಿಶೀಲನೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ https://rrcjaipur.in/ ಗೆ ಭೇಟಿ ನೀಡಬೇಕು
ಅಪ್ರೆಂಟಿಸ್ ವಿಭಾಗವನ್ನು ಆಯ್ಕೆ ಮಾಡಿಕೊಂಡು, ಅಧಿಸೂಚನೆ ಓದಬೇಕು
ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯ ಪ್ರಿಂಟ್ ಔಟ್ ತೆಗೆದಿಟ್ಟುಕೊಳ್ಳಬೇಕು