ಬೆಂಗಳೂರು : ಬೆಂಗಳೂರು ಹೊರವಲಯದ ಹೊಸಕೋಟೆ-ಚಿಂತಾಮಣಿ ಹೆದ್ದಾರಿಯಲ್ಲಿ ಭೀಕರ ರಸ್ತೆಅಪಘಾತ ಸಂಭವಿಸಿದ್ದು, ಇಬ್ಬರು ಯುವತಿಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊಸಕೋಟೆ ಮೂಲದ ಶೈಲ 25) ಶ್ವೇತ (22) ಮೃತ ದುರ್ದೈವಿಗಳು.
ಕಂಟೈನರ್ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದೆ. ರಸ್ತೆ ಕಾಮಗಾರಿ ನಡೆಯತ್ತಿದ್ದ ಕಾರಣ ರಸ್ತೆಲ್ಲಿದ್ದ ಜಲ್ಲಿಕಲ್ಲು ಬಿದ್ದಿತ್ತು. ಇದನ್ನು ಗಮನಿಸದೆ ದ್ವಿಚಕ್ರ ವಾಹನದಲ್ಲಿ ಬಂದ ಯುವತಿಯರು ಸ್ಕಿಡ್ ಆಗಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಕಂಟೈನರ್ ಲಾರಿ ಯುವತಿಯರ ಮೇಲೆ ಹರಿದಿದೆ.
ಕಂಟೈನರ್ ಲಾರಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಯುವತಿಯರು ಜೀವ ಬಿಟ್ಟಿದ್ಧಾರೆ. ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.