ಬೆಂಗಳೂರು: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ (Sports Authority of India Recruitment 2025) ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಸಿಸ್ಟಂಟ್ ಚೀಫ್ ಹುದ್ದೆಯ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅಕ್ಟೋಬರ್ 17ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ sportsauthorityofindia.nic.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ಕ್ರೀಡಾ ಪ್ರಾಧಿಕಾರ
ಒಟ್ಟು ಹುದ್ದೆಗಳು: 01
ಹುದ್ದೆ ಹೆಸರು: ಅಸಿಸ್ಟಂಟ್ ಚೀಫ್
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 17
ದೇಶದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಡಿಪ್ಲೋಮಾ, ಬಿಎಚ್ಎಂ, ಬಿಎಸ್ಸಿ, ಬಿಎ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು 50 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 50 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿಗಳನ್ನು ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ನಂತರ ನೇಮಕಾತಿಗೆ ಸಂಬಂಧಿಸಿದಂತೆ ಆದೇಶ ಹೊರಡಿಸಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು sportsauthorityofindia.nic.in ಗೆ ಭೇಟಿ ನೀಡಬೇಕು. ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.