ಬೆಳಗಾವಿ: ಬೆಳಗಾವಿಯ ಖಡೇಬಜಾರ್‌ನ ಖಡಕ್ ಗಲ್ಲಿಯಲ್ಲಿ ಶುಕ್ರವಾರ ರಾತ್ರಿ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ ನಡೆದಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಿಣಗೊಂಡಿದೆ. ಮತ್ತೊಂದೆಡೆ, ಕಲಬುರಗಿಯ ಆಳಂದ ಪಟ್ಟಣದಲ್ಲಿ ಐ ಲವ್ ಮೊಹಮ್ಮದ್ ಬ್ಯಾನರ್ ಪ್ರತ್ಯಕ್ಷವಾಗಿದೆ.
ಬೆಳಗಾವಿಯ ಮಾಬುಸುಬಾನಿ ದರ್ಗಾದ ಉರುಸ್ ಮೆರವಣಿಗೆಯ ವೇಳೆ ಐ ಲವ್ ಮೊಹಮ್ಮದ್ ಘೋಷಣೆಗೆ ಆಕ್ರೋಶ ವ್ಯಕ್ತವಾಗಿದ್ದು, ಪ್ರತಿ ವರ್ಷ ಈ ಕೂಟವೂ ಜಾಲ್ಗಾರ ಗಲ್ಲಿ ಮೂಲಕ ದರ್ಗಾಕ್ಕೆ ಹೋಗುತ್ತಿದ್ದ ಮೆರವಣಿಗೆ ಅನುಮತಿ ಇಲ್ಲದೇ ಪ್ರಶ್ನೆ ಈ ವರ್ಷ ಖಡಕ್ ಗಲ್ಲಿಗೆ ಬಂದಿರುವುದನ್ನು ಪ್ರಶ್ನಿಸಿದ ಸ್ಥಳೀಯ ಹಿಂದು ನಿವಾಸಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಜೊತೆಗೆ ತಲ್ವಾರ ಪ್ರದರ್ಶನ ಮಾಡಿ ಗೂಂಡಾ ವರ್ತನೆ ತೋರಿಸಿದ್ದಾರೆ.
ಇದರಿಂದ ಅಲ್ಲಿನ ಸ್ಥಳೀಯ ನಿವಾಸಿಗಳು ಖಡೇಬಜಾರ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಏಕಾಏಕಿ ಮೆರವಣಿಗೆಗೆ ಬಂದವರು ಮತ್ತು ಕಲ್ಲು ತೂರಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಪೊಲೀಸರು ಈಗಾಗಲೇ ಬಿಗುವಿನ ವಾತಾವರಣ ಪರಿಸ್ಥಿತಿ ತಿಳಿಗೊಳಿಸಲು ಯತ್ನಿಸುತ್ತಿದ್ದಾರೆ.
ಇನ್ನು ಕಲಬುರಗಿಯಲ್ಲಿ ಆಳಂದ ಪಟ್ಟಣದಲ್ಲಿ ಐ ಲವ್ ಮೊಹಮ್ಮದ್ ಬ್ಯಾನರ್ ವಿವಾದಕ್ಕೆ ಕಾರಣವಾಗಿತ್ತು. ಕಳೆದ ಎರಡು ದಿನಗಳ ಹಿಂದೆ ಲಾಡ್ಲೆ ಮಶಾಕ್ ದರ್ಗಾ ಉರುಸ್ ನಿಮಿತ್ಯ ಐ ಲವ್ ಮೊಹಮ್ಮದ್ ಬ್ಯಾನರ್ ಅಳವಡಿಸಿದ್ದು, ವಿಷಯ ತಿಳಿಯುತ್ತಿದ್ದಂತೆ ಕೂಡಲೆ ಸ್ಥಳಕ್ಕೆ ಬಂದ ಪೊಲೀಸರು ಬ್ಯಾನರ್ ತೆರವುಗೊಳಿಸಿದ್ದಾರೆ.