ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಮೊದಲ ಟೆಸ್ಟ್ ಪಂದ್ಯದಲ್ಲಿ ವಿಂಡೀಸ್ ಪಡೆಯನ್ನು ಬಗ್ಗು ಬಡಿದು ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಗಿಲ್ ಪಡೆ 2 ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ.
ಇನ್ನು ಈ ಸರಣಿಯ ದ್ದಿತೀಯ ಪಂದ್ಯವು ಅಕ್ಟೋಬರ್ 10 ರಿಂದ ಶುರುವಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲೂ ಗೆಲ್ಲುವ ಮೂಲಕ ಟೀಮ್ ಇಂಡಿಯಾ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ಪ್ಲ್ಯಾನ್ ಮಾಡಿಕೊಂಡಿದೆ.
ಲೈವ್ ಮ್ಯಾಚ್ ಎಲ್ಲಿ? ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಸರಣಿಯನ್ನು ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ. ಇದರರ್ಥ ನೀವು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಮೂಲಕ ಎರಡೂ ಟೆಸ್ಟ್ ಪಂದ್ಯಗಳನ್ನು ಟಿವಿಯಲ್ಲಿ ನೋಡಿ ಆನಂದಿಸಬಹುದು. ನೇರ ಪ್ರಸಾರಕ್ಕಾಗಿ ಭಾರತದಲ್ಲಿ ಟೆಸ್ಟ್ ಸರಣಿಯನ್ನು ಜಿಯೋಹಾಟ್ಸ್ಟಾರ್ನಲ್ಲಿ ಸ್ಟ್ರೀಮ್ ಮಾಡಲಾಗುತ್ತದೆ.
ಭಾರತ ಟೆಸ್ಟ್ ತಂಡ : ಶುಭ್ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ನಿತೀಶ್ ಕುಮಾರ್ ರೆಡ್ಡಿ, ಎನ್ ಜಗದೀಸನ್ (ವಿಕೆಟ್ ಕೀಪರ್)
ವೆಸ್ಟ್ ಇಂಡೀಸ್ ಟೆಸ್ಟ್ ತಂಡ : ರೋಸ್ಟನ್ ಚೇಸ್ (ನಾಯಕ), ಜೋಮೆಲ್ ವಾರಿಕನ್, ಕೆವ್ಲಾನ್ ಆಂಡರ್ಸನ್, ಅಲಿಕ್ ಅಥನಾಝ್, ಜಾನ್ ಕ್ಯಾಂಪ್ಬೆಲ್, ತೇಜ್ನರೈನ್ ಚಂದ್ರಪಾಲ್, ಜಸ್ಟಿನ್ ಗ್ರೀವ್ಸ್, ಶೈ ಹೋಪ್, ಟೆವಿನ್ ಇಮ್ಲಾಚ್, ಅಲ್ಝಾರಿ ಜೋಸೆಫ್, ಬ್ರಾಂಡನ್ ಕಿಂಗ್, ಆಂಡರ್ಸನ್ ಫಿಲಿಪ್, ಖಾರಿ ಪಿಯರೆ, ಜೇಡನ್ ಸೀಲ್ಸ್, ಜೋಹಾನ್ ಲೇನ್



















