ಬೆಂಗಳೂರು: ಬಿಪಿಎಲ್ ಕಾರ್ಡ್‌ದಾರರಿಗೆ ಸರ್ಕಾರ ದಸರಾ ಶಾಕ್ ನೀಡಿದೆ. ಉಚಿತವಾಗಿ ಪಡೆಯುತ್ತಿರುವ ಅನ್ನಭಾಗ್ಯ ಪಡಿತರ ಕಾರ್ಡ್ ಪರಿಷ್ಕರಣೆ ಮಾಡಿದೆ.
ನೆಲಮಂಗಲ ತಾಲೂಕಿನಲ್ಲಿ ಸುಮಾರು 4000 ಕ್ಕೂ ಹೆಚ್ಚು ಜನರ ಪಡಿತರ ಕಾರ್ಡ್ ಡಿಲೀಟ್ ಮಾಡಲು ಮುಂದಾಗಿದೆ. ಡಿಲೀಟ್ ಮಾಡಿದ್ದು ಮಾತ್ರವಲ್ಲದೇ ನ್ಯಾಯಬೆಲೆ ಅಂಗಡಿಯಲ್ಲಿ ಡಿಲೀಟ್ ಮಾಡಲಾದ ವ್ಯಕ್ತಿಗಳ ಹೆಸರಿನಲ್ಲಿರುವ ಕಾರ್ಡ್ ಗಳ ವಿವರಗಳನ್ನು ನೋಟಿಸ್ ಬೋರ್ಡ್‌ನಲ್ಲಿ ಅಂಟಿಸಲಾಗಿದೆ.
ನೋಟಿಸ್ ಬೋರ್ಡ್‌ನಲ್ಲಿ ಕೃಷಿ ಇತ್ಯಾದಿ ಆದಾಯಗಳಿಂದಾಗಿ ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂ. ಮೀರಿದೆ. ಹೀಗಾಗಿ ನಿಮ್ಮ ಪಡಿತರವನ್ನು ರದ್ದುಗೊಳಿಸಲು ಮುಂದಾಗಿದ್ದೇವೆ. ಈ ಬಾರಿ ಕೊನೆಯ ಬಾರಿಗೆ ಪಡಿತರ ನೀಡಲಾಗುತ್ತದೆ. ಮುಂದಿನ ತಿಂಗಳಿನಿಂದ ಪಡಿತರ ನೀಡಲಾಗುವುದಿಲ್ಲ ಎಂದು ಉಲ್ಲೇಖಿಸಲಾಗಿದೆ.



















