ನವದೆಹಲಿ : ಸುಪ್ರೀಂ ಕೋರ್ಟ್ ವಕೀಲರೊಬ್ಬರು ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರತ್ತ ಶೂ ಎಸೆದಿರುವ ಘಟನೆ ಇಂದು ನಡೆದಿದೆ.
ಮಧ್ಯಪ್ರದೇಶದ ಖಜುರಾಹೊ ದೇವಾಲಯ ಸಂಕೀರ್ಣದಲ್ಲಿ ವಿಷ್ಣುವಿನ ವಿಗ್ರಹವನ್ನು ಪುನಃಸ್ಥಾಪಿಸಲು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರು ವ್ಯಕ್ತಪಡಿಸಿದ ಅಭಿಪ್ರಾಯಕ್ಕೆ ಸಿಟ್ಟಾಗಿ 71 ವರ್ಷದ ವಕೀಲರು ಶೂ ಎಸೆದಿದ್ದಾರೆ.
ಕೋರ್ಟ್ ಹಾಲ್‌ನಲ್ಲಿ ವಕೀಲ ಶೂ ಎಸೆಯುತ್ತಿದ್ದಂತೆ ಅಲ್ಲಿದ್ದ ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿ ವಕೀಲರನ್ನು ತಡೆದು ಹೊರಗೆ ಕರೆದುಕೊಂಡು ಹೋಗಿದ್ದಾರೆ. ಕರೆದುಕೊಂಡು ಹೋಗುವಾಗ ಸನಾತನ ಧರ್ಮಕ್ಕೆ ಅವಮಾನ ಮಾಡುವುದನ್ನು ನಾನು ಸಹಿಸುವುದಿಲ್ಲ ಎಂದು ಕೂಗಿಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ.



















