ಬೆಂಗಳೂರು : ಕನ್ನಡದ ಬಿಗ್ ಬಾಸ್ ಸೀಸನ್ 12 ಆರಂಭಗೊಂಡು ಇನ್ನೂ ಒಂದು ವಾರ ಸಹ ಕಳೆದಿಲ್ಲ. ಅದಾಗಲೇ ಬಿಗ್ ಮನೆಗೆ ಬೀಗ ಬಿದ್ದಿದೆ. ಪರಿಸರ ನಿಯಮ ಉಲ್ಲಂಘನೆ ಆರೋಪದಡಿ ಬಿಡದಿಯಲ್ಲಿರುವ ಜಾಲಿವುಡ್ ಸ್ಟುಡಿಯೋಸ್‌ಗೆ ಬೀಗ ಜಡಿಯಲಾಗಿದೆ. ಈ ಮೂಲಕ ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋಗೆ ಬಹುದೊಡ್ಡ ಸಂಕಷ್ಟ ಎದುರಾಗಿದೆ.

ಬೆಂಗಳೂರು ದಕ್ಷಿಣ ಜಿಲ್ಲಾಡಳಿತ ಅಧಿಕಾರಿಗಳು ಜಾಲಿವುಡ್ ಸ್ಟುಡಿಯೋಸ್ ಆ್ಯಂಡ್ ಎಂಟರ್ಟೈನ್ಮೆಂಟ್ ಪ್ರೈವೆಟ್ ಲಿಮಿಡೆಟ್ ಕಂಪನಿಗೆ ಬೀಗ ಹಾಕಿದ್ದಾರೆ. ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಜಾಲಿವುಡ್ ಸ್ಟುಡಿಯೋಸ್ ಇದ್ದು, ಪರಿಸರ ನಿಯಮ ಉಲ್ಲಂಘನೆ ಆರೋಪದಡಿಯಲ್ಲಿ ಅಧಿಕಾರಿಗಳು ಬೀಗ ಜಡಿದಿದ್ದಾರೆ. ರಾಮನಗರ ತಹಶೀಲ್ದಾರ್ ತೇಜಸ್ವಿನಿ ಹಾಗೂ ಹಾಗೂ ಪೊಲೀಸರ ಸಮ್ಮುಖದಲ್ಲಿ ಬೀಗ ಜಡಿಯಲಾಗಿದೆ.
ಇದೇ ಸ್ಟುಡಿಯೋದಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋ ನಡೆಯುತ್ತಿದೆ. 17 ಮಂದಿ ಸ್ಪರ್ಧಿಗಳು ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ. ನೂರಾರು ತಂತ್ರಜ್ಞರು ಈ ರಿಯಾಲಿಟಿ ಶೋಗಾಗಿ ಕೆಲಸ ಮಾಡುತ್ತಿದ್ದಾರೆ. ಜಾಲಿವುಡ್ ಸ್ಟುಡಿಯೋದಿಂದ ಸರಿಯಾದ ರೀತಿಯಲ್ಲಿ ತಾಜ್ಯ ಸಂಸ್ಕರಣೆ ಮತ್ತು ವಿಲೇವಾರಿ ಆಗಿಲ್ಲ ಎಂಬ ಆರೋಪ ಇದೆ. ಆದ್ದರಿಂದ ನೋಟಿಸ್ ನೀಡಿ ಬೀಗ ಜಡಿಯಲಾಗಿದ್ದು, ಬಿಗ್ ಬಾಸ್ ಶೋ ಬಂದ್ ಆಗುವ ಸೂಚನೆ ಕಾಣಿಸಿದೆ.