ಬೆಂಗಳೂರು: ಬಿಡದಿ ಬಳಿ ಬಿಗ್‌ಬಾಸ್ ಶೋ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಗೆ ಮಾಲಿನ್ಯ ನಿಯಂತ್ರಣ ಮಂಡಳಿ ಬೀಗ ಹಾಕಿದ್ದಕೆ ಜೆಡಿಎಸ್ ನಾಯಕರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಬಿಗ್ ಬಾಸ್ ರಿಯಾಲಿಟಿ ಷೋ ಬಂದ್ ಮಾಡಿಸಿ, ಕಲಾವಿದರ ಮೇಲೆ ಸೇಡು ತೀರಿಸಿಕೊಂಡ ನಟ್ಟು ಬೋಲ್ಟ್ ಮಿನಿಸ್ಟರ್ ಡಿಕೆ ಶಿವಕುಮಾರ್ ಎಂದು ಸಾಮಾಜಿಕ ಜಾಲತಾಣದಲ್ಲಿ ಆರೋಪ ಮಾಡಿದ್ದಾರೆ
ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಹಾಗೂ ಇತರರು ರಾಜಕೀಯ ಮಾಡುತ್ತಿದ್ದಾರೆ. ಅವರು ಏನಾದರೂ ಮಾಡಲಿ ಬಿಡಿ, ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ. ನಾನೂ ಎಲ್ಲಾ ಕಡೆ ವಿಚಾರಿಸಿದ್ದೇನೆ. ಮಾಲಿನ್ಯ ನಿಯಂತ್ರಣ ಮಂಡಳಿಯವರು ಸೀಜ್ ಮಾಡಿದ್ದಾರೆ. ಡಿ.ಸಿ ಅವರ ಜೊತೆ ಮಾತಾಡಿದ್ದೇನೆ, ಏನು ಮಾಡಲು ಸಾಧ್ಯ ಅದನ್ನು ಮಾಡಲು ತಿಳಿಸಿದ್ದೇನೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇದು ಅನೇಕರ ಉದ್ಯೋಗದ ವಿಚಾರ. ಜನರಿಗೆ ಇಲ್ಲಿ ಮನರಂಜನೆಯೂ ಮುಖ್ಯ, ಖಾಸಗಿಯವರು ಬಂಡವಾಳ ಹೂಡಿಕೆ ಮಾಡಿರುತ್ತಾರೆ. ಸಣ್ಣ ಪುಟ್ಟ ತಪ್ಪುಗಳನ್ನು ಸರಿಪಡಿಸಿಕೊಳ್ಳಿ ಎಂದು ಹೇಳಿದ್ದೇನೆ. ಬಿಗ್ ಬಾಸ್ ಕಾರ್ಯಕ್ರಮ ನಡೆಸಲು ಅನುಮತಿ ನೀಡುವಂತೆಯೂ ಡಿಸಿಗೆ ಸೂಚನೆ ನೀಡಿದೇನೆ ಎಂದು ತಿಳಿಸಿದ್ದಾರೆ.