ಬೆಂಗಳೂರು: ಕಲಬುರಗಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 81 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 81 ಪ್ರೊಫೆಸರ್ ಹಾಗೂ ಮೆಡಿಕಲ್ ಆಫೀಸರ್ (CUK Recruitment 2025) ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಅಥವಾ ಆಫ್ ಲೈನ್ ಮೂಲಕವೂ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇಲ್ಲಿದೆ.
“ಹುದ್ದೆಗಳ ಸಂಕ್ಷಿಪ್ತ ವಿವರ”
ನೇಮಕಾತಿ ಸಂಸ್ಥೆ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ
ಒಟ್ಟು ಹುದ್ದೆಗಳು: 81
ಹುದ್ದೆಗಳ ಹೆಸರು: ಪ್ರೊಫೆಸರ್ ಹಾಗೂ ಮೆಡಿಕಲ್ ಆಫೀಸರ್
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್ ಅಥವಾ ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 30
ಯಾವೆಲ್ಲ ಹುದ್ದೆಗಳು ಖಾಲಿ?
ಇಂಟರ್ನಲ್ ಆಡಿಟ್ ಆಫೀಸರ್ 1, ಪ್ರೊಫೆಸರ್ 12, ಅಸೋಸಿಯೇಟ್ ಪ್ರೊಫೆಸರ್ 19, ಅಸಿಸ್ಟಂಟ್ ಪ್ರೊಫೆಸರ್ 25, ಲೈಬ್ರರಿ ಅಸಿಸ್ಟಂಟ್ 4, ಕುಕ್ 1 ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಕನಿಷ್ಠ 32ರಿಂದ 56 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಬಿ.ಇ, ಬಿ.ಟೆಕ್, ಎಂಬಿಬಿಎಸ್, ಎಂಎಸ್ಸಿ ಸೇರಿ ಹಲವು ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 2.09 ಲಕ್ಷ ರೂಪಾಯಿವರೆಗೆ ಆಯಾ ಹುದ್ದೆಗಳ ಅನ್ವಯ ಸಂಬಳ ನೀಡಲಾಗುತ್ತದೆ. ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಜನರಲ್, ಒಬಿಸಿ, ಇಡಬ್ಲ್ಯೂಎಸ್ ನವರಿಗೆ 1 ಸಾವಿರ ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸುವವರು cuk.ac.in ವೆಬ್ ಸೈಟ್ ಗೆ ಭೇಟಿ ನೀಡಬಹುದು. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವವರು Deputy Registrar, Recruitment cell, Central University of Karnataka, Kadaganchi, Aland Road, Kalaburagi District-585367 ವಿಳಾಸಕ್ಕೆ ಅರ್ಜಿಗಳನ್ನು ಕಳುಹಿಸಬಹುದಾಗಿದೆ.