ಚೆನ್ನೈ : ಕೆಮ್ಮಿನ ಸಿರಪ್ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳ ಸಾವಿಗೆ ಕಾರಣವಾದ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಿಸುತ್ತಿದ್ದ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಮಾಲೀಕ ಎಸ್. ರಂಗನಾಥನ್ ಬಂಧಿತ ಆರೋಪಿ.
ಮಧ್ಯಪ್ರದೇಶ ಮತ್ತು ತಮಿಳುನಾಡು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ರಂಗನಾಥನ್‌ನನ್ನು ಬುಧವಾರ ತಡರಾತ್ರಿ ಚೆನ್ನೈನಲ್ಲಿ ಬಂಧಿಸಲಾದ್ದು, ಸದ್ಯ ವಿಚಾರಣೆ ನಡೆಸಲಾಗುತ್ತಿದೆ. ವಿಷಕಾರಿ ಸಿರಪ್ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದರು. ಆತನ ಬಂಧನಕ್ಕೆ ಸಹಾಯ ಮಾಡಿದವರಿಗೆ 20,000 ರೂ. ಬಹುಮಾನವನ್ನೂ ಘೋಷಿಸಲಾಗಿತ್ತು.
ಈ ಹಿಂದೆ ಸ್ರೆಸನ್ ಫಾರ್ಮಾ ವಿರುದ್ಧ ಪ್ರಕರಣ ಸಹ ದಾಖಲಿಸಲಾಗಿತ್ತು. ಮಧ್ಯಪ್ರದೇಶವಲ್ಲದೆ ರಾಜಸ್ಥಾನದಲ್ಲೂ ಈ ಸಿರಪ್ ಸೇವಿಸಿದ ನಂತರ ಮಕ್ಕಳು ಸಾವನ್ನಪ್ಪಿರುವ ವರದಿಗಳಿವೆ. ಕೋಲ್ಡ್ರಿಫ್ ಹೆಸರಿನ ಈ ಸಿರಪ್ ಸೇವಿಸಿದ ಮಕ್ಕಳಲ್ಲಿ ಕಿಡ್ನಿ ಸೋಂಕು ಕಾಣಿಸಿಕೊಂಡು, ಹೆಚ್ಚಿನ ಸಂಖ್ಯೆಯ ಮಕ್ಕಳು ಸಾವನ್ನಪ್ಪಿದ್ದರು.
“ಶಾನ್ ಮಸೂದ್, ಭಾರತದ ನಾಯಕ” : ಕಾಮೆಂಟರಿ ವೇಳೆ ದಕ್ಷಿಣ ಆಫ್ರಿಕಾದ ದಿಗ್ಗಜ ಶಾನ್ ಪೊಲಾಕ್ ಅವರಿಂದ ಮಹಾ ಪ್ರಮಾದ!