ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಅವರ ಬೆಂಗಾವಲು ವಾಹನ ಚಾಲಕ ಆತ್ಮಹತ್ಯೆಗೆ ಶರಣಾಗಿದ್ದಾರೆ.
33 ವರ್ಷದ ಶರಣಗೌಡ ರಾಮಗೋಳ್ ಬೆಂಗಳೂರಿನ ಬಾಪೂಜಿನಗರದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.
ಶರಣಪ್ಪ ಅವರು ಮಾಗಡಿ ರಸ್ತೆ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೆಬಲ್ ಆಗಿರುವ ಪತ್ನಿ ಶೈಲಶ್ರೀ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಮೂಲತಃ ‘ಕಲಬುರಗಿ ಜಿಲ್ಲೆಯವರಾಗಿರುವ ಶರಣಪ್ಪ ಕಳೆದ ಎರಡೂವರೆ ವರ್ಷಗಳಿಂದ ಆರ್. ಅಶೋಕ ಅವರ ಬೆಂಗಾವಲು ವಾಹನ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಕೌಟುಂಬಿಕ ಕಲಹದ ಕಾರಣಕ್ಕೆ ಶರಣಪ್ಪ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.
ಈ ಬಗ್ಗೆ ಬ್ಯಾಟರಾಯನಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.