ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ರೈಲ್ ಇಂಡಿಯಾ ಟೆಕ್ನಿಕಲ್ ಆ್ಯಂಡ್ ಎಕನಾಮಿಕ್ ಸರ್ವಿಸಸ್ ಸಂಸ್ಥೆಯಲ್ಲಿ (RITES Recruitment 2025) ಖಾಲಿ ಇರುವ 09 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸೀನಿಯರ್ ರೆಸಿಡೆಂಟ್ ಎಂಜಿನಿಯರ್, ಎಕ್ಸ್ ಪರ್ಟ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರೈಲ್ ಇಂಡಿಯಾ ಟೆಕ್ನಿಕಲ್ ಆ್ಯಂಡ್ ಎಕನಾಮಿಕ್ ಸರ್ವಿಸಸ್ ಸಂಸ್ಥೆಯಲ್ಲಿ (RITES)
ಒಟ್ಟು ಹುದ್ದೆಗಳು: 9
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 16
ಉದ್ಯೋಗ ಸ್ಥಳ: ಗುರುಗ್ರಾಮ (ಹರಿಯಾಣ), ದೆಹಲಿ
ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪದವಿ, ಬಿ.ಇ, ಬಿ.ಟೆಕ್, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 55 ವರ್ಷ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ.
ನೇಮಕಾತಿ ಹೊಂದಿದವರಿಗೆ ಮಾಸಿಕ 70 ಸಾವಿರ ರೂಪಾಯಿಯಿಂದ 2 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು rites.com ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮೊದಲಿಗೆ ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ, ನೇಮಕಾತಿ ನಡೆಸಲಾಗುತ್ತದೆ.
ಸಂದರ್ಶನದ ಸ್ಥಳ
Shikhar, Plot 1, Leisure Valley, RITES Bhawan, Sector 29, Gurugram, 122001, Haryana (ಸಂದರ್ಶನದ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಗಿದ ಬಳಿಕ ದಿನಾಂಕ ಘೋಷಣೆ ಮಾಡಲಾಗುತ್ತದೆ.)