ಬೆಂಗಳೂರು: ಮಧ್ಯ ಕರ್ನಾಟಕ, ಕರಾವಳಿ, ಹಳೆ ಮೈಸೂರು ಸೇರಿದಂತೆ ರಾಜ್ಯದ 24 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಜಾರಿಯಾಗಿದ್ದು, ಅದರಲ್ಲೂ ಬೆಂಗಳೂರು ನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿಯೂ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಕರಾವಳಿಯಲ್ಲಿ ಗಂಟೆಗೆ 30-40ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ.