ಬೆಂಗಳೂರು: ಬೆಳ್ಳಿ ಮತ್ತು ಬಂಗಾರ ದರದಲ್ಲಿ ಸಾರ್ವಕಾಲಿಕ ಏರಿಕೆಯಾಗಿದೆ. ಮೊಟ್ಟ ಮೊದಲ ಬಾರಿಗೆ ಬೆಳ್ಳಿಯ ದರ ಪ್ರತಿ ಕೆಜಿಗೆ 1,60,000 ರೂ. ಏರಿಕೆಯಾಗಿದೆ. ಬಂಗಾರದ ದರ ಕೂಡ ಪ್ರತಿ 10 ಗ್ರಾಂ ಗೆ 1,24,000 ರೂ. ಹೆಚ್ಚಳಗೊಂಡಿದೆ.
ದಿನದಿಂದ ದಿನಕ್ಕೆ ಚಿನ್ನದ ಬೆಲೆ ಗಗನಕ್ಕೇರುತ್ತಿದ್ದು, ಬಂಗಾರದ ಬೆಲೆಯಲ್ಲಿ ಆಲ್ ಟೈಮ್ ರೆಕಾರ್ಡ್ ನಿರ್ಮಾಣವಾಗುತ್ತಿದೆ. ಕಳೆದ ಒಂದು ವರ್ಷದಲ್ಲಿ 65% ರಷ್ಟು ದರ ಏರಿಕೆ ಆಗಿದ್ದರೂ ಸಹ ಚಿನ್ನದ ಮೇಲೆ ಕ್ರೇಜ್ ಮಾತ್ರ ಕಡಿಮೆ ಆಗಿಲ್ಲ. ಇನ್ನು ಬೆಳ್ಳಿ ಒಂದು ವರ್ಷದಲ್ಲಿ 75% ಏರಿಕೆಯಾಗಿದೆ. ಹಿಂದಿನ ಯಾವ ವರ್ಷಗಳಲ್ಲೂ ಆಗದ ಬೆಲೆ ಏರಿಕೆ ಕಳೆದ ಈ ವರ್ಷ ಅಕ್ಟೋಬರ್ ನಲ್ಲಿ ಆಗಿದೆ. ದೀಪಾವಳಿ ಹಾಗೂ ಈಗಾಗಲೇ ಮದುವೆ ಸೀಜನ್ ಆರಂಭವಾಗಿದ್ದು, ಮಧ್ಯಮ ವರ್ಗ ಹಾಗೂ ಬಡವರ್ಗದ ಮಹಿಳೆಯರಿಗೆ ಬಂಗಾರ ಕೊಳ್ಳಂಗಿಲ್ಲ, ಮುಟ್ಟಂಗಿಲ್ಲ ಎನ್ನುವಂತಾಗಿದೆ.
ಇನ್ನೂ ಎರಡ್ಮೂರು ತಿಂಗಳು ಇದೇ ದರ ಇರಲಿದ್ದು, 10 ಗ್ರಾಂ ಚಿನ್ನದ ಬೆಲೆ 1,35,000 ರೂ. ಹಾಗೂ ಬೆಳ್ಳಿ ಕೆ.ಜಿಗೆ 1,75,000 ರೂ.ವರೆಗೆ ಹೆಚ್ಚಳವಾಗೋ ಸಾಧ್ಯತೆಯಿದೆ. ಇನ್ನೂ ಒಂದೆರಡು ತಿಂಗಳಲ್ಲಿ ಕೇವಲ 10ರಿಂದ 15% ಮಾತ್ರ ಇಳಿಕೆಯಾಗುವ ನಿರೀಕ್ಷೆಯಿದೆ.