ಮಂಗಳೂರು : 2017ರಲ್ಲಿ ನಡಡೆದಿದ್ದ ಎಸ್ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಮತ್ತು ಇತ್ತೀಚೆಗೆ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಹಿಂದೂ ಸಂಘಟನೆ ಮುಖಂಡ ಭರತ್ ಕುಮ್ಡೇಲು ಶುಕ್ರವಾರ ಮಂಗಳೂರು ನ್ಯಾಯಾಲಯಕ್ಕೆ ಸರೆಂಡರ್ ಆಗಿದ್ದಾರೆ. 3-4 ತಿಂಗಳು ವಿಚಾರಣೆಗೆ ಹಾಜರಾಗದೆ ಭರತ್ ಕುಮ್ಡೇಲು ತೆಲೆಮರೆಸಿಕೊಂಡಿದ್ದರು.
ಎಸ್ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಮತ್ತು ಇತ್ತೀಚೆಗೆ ನಡೆದ ಅಬ್ದುಲ್ ರಹಿಮಾನ್ ಕೊಲೆ ಎರಡು ಪ್ರಕರಣದಲ್ಲಿ ಭರತ್ ಕುಮ್ಡೇಲು ಪ್ರಮುಖ ಆರೋಪಿಯಾಗಿದ್ದು, ಅಬ್ದುಲ್ ರಹಿಮಾನ್ ಕೊಲೆ ಕೇಸ್ ಬಳಿಕ ಭರತ್ ಕುಮ್ಡೇಲು ತಲೆಮರೆಸಿಕೊಂಡಿದ್ದರು. ಕಳೆದ 3-4 ತಿಂಗಳು ವಿಚಾರಣೆಗೆ ಹಾಜರಾಗಿರಲಿಲ್ಲ.
ಹೀಗಾಗಿ ಕೋರ್ಟ್‌ಗೆ ಹಾಜರಾಗದ ಕಾರಣ ವಾರಂಟ್ ಜಾರಿಯಾಗಿತ್ತು. ಜೊತೆಗೆ ಕೆಲ ದಿನಗಳ ಹಿಂದಷ್ಟೇ ಭರತ್ ಕುಮ್ಡೇಲು ಸೇರಿದಂತೆ ಕೆಲ ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಕೇಸ್ ದಾಖಲಿಸಲಾಗಿತ್ತು. ವಾರಂಟ್ ಮತ್ತು ಕೋಕಾ ಕೇಸ್ ಹಿನ್ನೆಲೆ ಸದ್ಯ ಭರತ್ ಜಿಲ್ಲಾ ಕೋರ್ಟ್‌ಗೆ ಶರಣಾಗಿದ್ದಾರೆ. ನ್ಯಾಯಾಲಯವು ಆರೋಪಿಗೆ ಅ.25ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.